Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರಿನಲ್ಲಿ ನಡೆದ ಜನತಾ ದರ್ಶನ ಹೇಗಿತ್ತು ? ಸಚಿವ ಸುಧಾಕರ್ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.25 : ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಬೇಕು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿರಿಯೂರು ನಗರದ ಹುಳಿಯಾರು ರಸ್ತೆಯ ತಾಹಾ ಪ್ಯಾಲೇಸ್ ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಈಗಾಗಲೇ ನಾಲ್ಕು ತಿಂಗಳನ್ನು ಪೂರೈಸಿದೆ. ಆಡಳಿತ ಚುರುಕುಗೊಳಿಸಲು ಜನರ ಸಂಕಷ್ಟಗಳಿಗೆ ಸ್ಪಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟ ಸಂದೇಶ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಚಿತ್ರದುರ್ಗ ತಾಲೂಕಿನಲ್ಲಿ 800,
ಚಳ್ಳಕೆರೆ ತಾಲೂಕಿನಲ್ಲಿ 900,
ಹಿರಿಯೂರು ತಾಲೂಕಿನಲ್ಲಿ 950,
ಹೊಳಲ್ಕೆರೆ ತಾಲೂಕಿನಲ್ಲಿ 1285, ಹೊಸದುರ್ಗ ತಾಲೂಕಿನಲ್ಲಿ 1441, ಮೊಳಕಾಲ್ಮೂರು ತಾಲೂಕಿನಲ್ಲಿ 1530 ಪೌತಿ ಖಾತೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 6500ಕ್ಕೂ ಹೆಚ್ಚು ಪೌತಿ ಖಾತೆಗಳು ಆಗಬೇಕಿದೆ.

ಅಕ್ಟೋಬರ್ 31ರ ಒಳಗೆ ಈ ಪೌತಿ ಖಾತೆಗಳನ್ನು ಸಂಪೂರ್ಣವಾಗಿ ವಿಲೇವಾರಿ ಕಂದಾಯ ಇಲಾಖೆ ವತಿಯಿಂದ ಆಂದೋಲನ ಹಮ್ಮಿಕೊಳ್ಳಲಾಗಿದೆ. ಕಾಲಮಿತಿಯೊಳಗೆ ಈ ಪೌತಿ ಖಾತೆಗಳನ್ನು ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.

ಯಾವುದೇ ಸಾರ್ವಜನಿಕರು ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ,  ತಹಶೀಲ್ದಾರ್ ಕಚೇರಿಗಳಿಗೆ ಅಲೆದಾಡಬಾರದು. ಜನರಿಗೆ ತೊಂದರೆಯಾಗದಂತೆ ಸಮರ್ಪಕವಾಗಿ ಸರ್ಕಾರದ ಯೋಜನೆ, ಸೌಲಭ್ಯಗಳನ್ನು ತಲುಪಿಸಲು, ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡ್ಯೊಯಲು ಪ್ರಾಮಾಣಿಕವಾಗಿ ಅಧಿಕಾರಿಗಳು ಶ್ರಮಿಸಬೇಕು ಎಂದು ಸಚಿವ ಡಿ ಸುಧಾಕರ್ ಹೇಳಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್. ಜೆ ಮಾತನಾಡಿ, ಸರ್ಕಾರ ಯೋಜನೆಗಳು ಯಶಸ್ವಿಯಾಗಬೇಕಾದರೆ, ಈ ಯೋಜನೆಗಳು ಸಮರ್ಪಕವಾಗಿ ತಲುಪಿದಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರದ ಹಲವು ಮಹತ್ವಾಕಾಂಕ್ಷೆ ಯೋಜನೆಗಳನ್ನು ಅನಗತ್ಯ ವಿಳಂಬ ಮಾಡದೇ, ಜನ ಸಾಮಾನ್ಯರನ್ನು ಅಲೆದಾಡಿಸದೇ, ಮನೆಬಾಗಿಲಿಗೆ ಬಂದು ಸಮಸ್ಯೆಗಳನ್ನ ಕೇಳುವ ಮೂಲಕ, ಆ ಸಮಸ್ಯೆಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥ ಪಡಿಸಲು ಜಿಲ್ಲೆಯ ಅಧಿಕಾರಿಗಳು ಶ್ರಮಿಸುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ 15 ದಿನಕ್ಕೊಮ್ಮೆ ಒಂದು ತಾಲ್ಲೂಕು ಆಯ್ಕೆ ಮಾಡಿ,ಆ ತಾಲ್ಲೂಕಿನ ಜನಪ್ರತಿನಿಧಿಗಳು, ಅಧಿಕಾರಿಗಳು ಎಲ್ಲರೂ ಸೇರಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗಲಿದೆ ಎಂದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಜನಸ್ಪಂದನ-iPGRS ಪೋರ್ಟಲ್ ನಲ್ಲಿ ಅರ್ಜಿ, ದೂರುಗಳನ್ನು ಸ್ವೀಕರಿಸಿ, ಇಲಾಖಾವಾರು ವಿಂಗಡಣೆ ಮಾಡಿ, ಅರ್ಜಿಯ ಸ್ಥಿತಿಗತಿಯ ಬಗ್ಗೆ ತಿಳಿಯಲು ಇದರಿಂದ ಅನುಕೂಲವಾಗಲಿದೆ. ಈ ಅರ್ಜಿಯನ್ನು ಅಧಿಕಾರಿಗಳು ಕಾಲಮಿತಿಯೊಳಗೆ ಇತ್ಯರ್ಥಪಡಿಸಬೇಕು. ಹಾಗಾಗಿ ಜನಸಾಮಾನ್ಯರು ಜನತಾ ದರ್ಶನ ಕಾರ್ಯಕ್ರಮವನ್ನು  ಉತ್ತಮ ರೀತಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು.

ಸಾರ್ವಜನಿಕರ ಅಹವಾಲು, ಅರ್ಜಿಗಳನ್ನು ಕಾನೂನು ರೀತಿಯಲ್ಲಿ ಕ್ರಮವಹಿಸಲು ಬದ್ಧರಾಗಿದ್ದೇವೆ. ಜನತಾ ದರ್ಶನ ಕಾರ್ಯಕ್ರಮಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅರ್ಜಿಗಳನ್ನು ಆಯಾ ಇಲಾಖಾ ಮುಖ್ಯಸ್ಥರು ನಿಗದಿತ ಸಮಯದೊಳಗೆ ಇತ್ಯರ್ಥಪಡಿಸಲು ಎಲ್ಲ ರೀತಿಯ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜನರಿಗೆ  ಯಾವುದೇ ರೀತಿಯ ತೊಂದರೆಯಾಗದಂತೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಹಾಗೂ ಜನತಾ ದರ್ಶನದಲ್ಲಿ ಸರ್ಕಾರದ ಯೋಜನೆಗಳ ಕುರಿತು ಅರಿವು ಮೂಡಿಸಬೇಕು.ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯುವಂತಾಗಬೇಕು. ಕಂದಾಯ ಇಲಾಖೆಯ ಫೌತಿಖಾತೆಯನ್ನು ಅಂದೋಲನ ರೀತಿಯಲ್ಲಿ  ಕೈಗೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್‌.ಜೆ.ಸೋಮಶೇಖರ್ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಏಕ ಕಾಲದಲ್ಲಿ ಜನತಾ ದರ್ಶನ ನಡೆಯುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಜಿಲ್ಲೆಯ ನಾಗರಿಕರು ಸರ್ಕಾರದ ಯೋಜನೆಗಳು, ಸೌಲಭ್ಯಗಳು ವಿಳಂಬವಾದ ಸಂದರ್ಭದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಜನತಾ ದರ್ಶನ ಉತ್ತಮ ವೇದಿಕೆಯಾಗಿದೆ. ಗ್ರಾಮೀಣ ಭಾಗದ ಸಾರ್ವಜನಿಕರ ಕುಂದುಕೊರತೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತಿಯ ಕಚೇರಿಯಲ್ಲಿಯೂ ಕೂಡ ಅಹವಾಲುಗಳನ್ನು ಸಲ್ಲಿಸಬಹುದು ಎಂದರು.

ಯಾವುದಾದರೂ ಕಚೇರಿಯಲ್ಲಿ ಕಡತ ವಿಲೇವಾರಿ ಆಗದೇ ಬಾಕಿ ಇದ್ದರೆ ಜನತಾ ದರ್ಶನದ ಕೌಂಟರ್ ನಲ್ಲಿ ಅಹವಾಲು ದಾಖಲಿಸಿ, ಸ್ವೀಕೃತಿ ಪಡೆಯಿರಿ ಎಂದು ತಿಳಿಸಿದ ಅವರು, ಸರ್ಕಾರದ ಹಲವು ಯೋಜನೆಗಳನ್ನು ತಿಳಿದುಕೊಳ್ಳುವುದು ಆದ್ಯ ಕರ್ತವ್ಯವಾಗಿದೆ ಎಂದರು.

ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ಸೌಲಭ್ಯ ವಿತರಣೆ:  ಹಿರಿಯೂರು ನಗರದ ತಾಹಾ ಪ್ಯಾಲೇಸ್‌ನಲ್ಲಿ ಸೋಮವಾರ‌ ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡಯಿತು. ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸರ್ಕಾರದ ವಿವಿಧ ಸೌಲಭ್ಯಗಳನ್ನು ವಿತರಣೆ ಮಾಡಿದರು.

ಡಿ.ಎಮ್.ಎಫ್, ಜಿಲ್ಲಾ ಪಂಚಾಯಿತಿ ಅನುದಾನದಡಿ 8 ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶೂ, ಶೇಕಡಾ ನೂರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಶಾಲೆಗಳಿಗೆ ಅಭಿನಂದನಾ ಪತ್ರ, ಕಾರ್ಮಿಕ ಇಲಾಖೆ ವತಿಯಿಂದ ನೊಂದಣಿ ಕಾರ್ಡ್, ಲ್ಯಾಪ್ ಟಾಪ್, ಅಂತರ್ಜಾತಿ ವಿವಾಹವಾದವರಿಗೆ ಸಮಾಜ ಕಲ್ಯಾಣ ಇಲಾಖೆ ಬಾಂಡ್, ಕಂದಾಯ ಇಲಾಖೆ 94ಸಿ ಹಕ್ಕು ಪತ್ರ, ವಿವಿಧ ಪಿಂಚಣಿ ಆದೇಶ ಪತ್ರಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಕನ್ಯ ಸಮೃದ್ಧಿ ಬಾಂಡ್‌ಗಳನ್ನು ಸಚಿವ ಡಿ.ಸುಧಾಕರ್ ಫಲಾನುಭವಿಗಳಿಗೆ ವಿತರಿಸಿದರು.

ಸಾರ್ವಜನಿಕರಿಂದ ವಿವಿಧ ಇಲಾಖೆಗಳಿಗೆ ಸಂಬಂದಿಸಿದ ಅಹವಾಲು ಅರ್ಜಿ ಸ್ವೀಕರಿಸಲು, ತಂತ್ರಾಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಸ್ಥಳದಲ್ಲಿ
ನಾಲ್ಕು ಕೌಂಟರ್ ಗಳನ್ನು ತೆರೆದು ಅರ್ಜಿ ಸ್ವೀಕೃತಿಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ.

ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ  ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ತರೆಯಲಾದ ವಸ್ತು ಪ್ರದರ್ಶನ ಮಳಿಗೆಗಳನ್ನು ಸಚಿವ ಡಿ.ಸುಧಾಕರ್ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತೀಕ್‌, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಜೆ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ರಂಗನಾಥ, ಜಿ.ಪಂ.ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಹಿರಿಯೂರು ತಹಶಿಲ್ದಾರ್ ರಾಜೇಶ್ ಕುಮಾರ್ ಸೇರಿದಂತೆ ಎಲ್ಲಾ ಜಿಲ್ಲಾ  ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

error: Content is protected !!