in ,

ಪ್ರಧಾನಿ ಮೋದಿ ಸ್ವಾಗತಕ್ಕೆ ಮದುವಣಗಿತ್ತಿಯಂತೆ ಶೃಂಗಾರಗೊಂಡ ಹುಬ್ಬಳ್ಳಿ

suddione whatsapp group join

ಹುಬ್ಬಳ್ಳಿ: ಅವಳಿ ನಗರದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಪ್ರಧಾನಿ ಮೋದಿಯವರ ಸ್ವಾಗತಕ್ಕೆ ಹುಬ್ಬಳ್ಳಿ-ಧಾರವಾಡ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

2023ರ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು, ಬಿಜೆಪಿ ನಾಯಕರು ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಗುಜರಾತ್ ನಂತರ ಕರ್ನಾಟಕವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ದೆಲ್ಲಿ ನಾಯಕರೆಲ್ಲ ಕರ್ನಾಟಕದತ್ತ ಮುಖ ಮಾಡುತ್ತಿದ್ದಾರೆ. ಅಮಿತ್ ಶಾ, ನಿತಿನ್ ಗಡ್ಕರಿ, ಜೆ ಪಿ ನಡ್ಡಾ ಭೇಟಿ ಬಳಿಕ ಈಗ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ.

ಇಂದು ಸಂಜೆ ನಾಲ್ಕು ಗಂಟೆಗೆ ಪ್ರಧಾನಿ ಮೋದಿ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ರೈಲ್ವೇ ಮೈದಾನದಲ್ಲಿ ಬೃಹತ್ ವೇದಿಕೆ ಮಾಡಲಾಗಿದ್ದು, 30 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ. ಮೋದಿ ಕಾರ್ಯಕ್ರಮಕ್ಕೂ ಮುನ್ನ ಯುವ ಸಾಂಸ್ಕೃತಿಕ ಗತ ವೈಭವ ಅನಾವರಣಗೊಳ್ಳಲಿದೆ. ವಿವಿಧ ರಾಜ್ಯದ ಜಾನಪದ ಕಲೆ, ಯೋಗ, ಮಲ್ಲಗಂಭ ಪ್ರದರ್ಶನ ನಡೆಯಲಿದೆ. ಬಳಿಕ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ವೇದಿಕೆಯಲ್ಲಿರಲಿದ್ದಾರೆ.

What do you think?

Written by suddionenews

Leave a Reply

Your email address will not be published.

GIPHY App Key not set. Please check settings

ಕೀಲು ನೋವು : ಚಳಿಗಾಲದಲ್ಲಿ ಕೀಲು ನೋವು ಕಡಿಮೆಯಾಗಲು ಹೀಗೆ ಮಾಡಿ

ರೈಲ್ವೇ ನಿಲ್ದಾಣದಲ್ಲಿ ಹೃದಯಾಘಾತವಾಗಿ ಶಿವಚಾರ್ಯ ಸ್ವಾಮೀಜಿ ಲಿಂಗೈಕ್ಯ..!