Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ: ಚುನಾವಣೆ ದಿನವೇ ಗ್ರಾಹಕರಿಗೆ ಸಿಹಿ ಸುದ್ದಿ

---Advertisement---

ಅಸ್ಸಾಂ, ಕೇರಳ ಹಾಗೂ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗಳು ಮತ್ತು ರಾಜ್ಯದ ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಲ್ಲಿ ಉಪಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆ, ಚಿನ್ನದ ಮಾರುಕಟ್ಟೆಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಇಂದು ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ದಾಖಲಾಗಿದ್ದು, ಆಭರಣ ಖರೀದಿಸಲು ಮುಂದಾಗಿದ್ದ ಗ್ರಾಹಕರಿಗೆ ಇದು ಶುಭ ಸುದ್ದಿಯಾಗಿದೆ.

ನಿನ್ನೆ (ಏಪ್ರಿಲ್ 8) 24 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಮಿಗೆ ಸುಮಾರು ₹398 ಏರಿಕೆಯಾಗಿತ್ತು. ಅಮೆರಿಕ–ಇರಾನ್ ಕದನ ವಿರಾಮ ಘೋಷಣೆಯ ಬಳಿಕ ಚಿನ್ನದ ಬೆಲೆ ಏರಿಕೆ ಕಂಡಿತ್ತು. ಆದರೆ ಇಂದು (ಏಪ್ರಿಲ್ 9) ಬೆಲೆಯಲ್ಲಿ ತೀವ್ರ ಇಳಿಕೆ ಕಂಡಿದೆ.ಇಂದು 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ₹2,340 ಇಳಿಕೆ ಕಂಡಿದ್ದು, ಪ್ರತಿ ಗ್ರಾಮ್ ಚಿನ್ನದ ಬೆಲೆ ₹15,148ಕ್ಕೆ ಇಳಿದಿದೆ. ಅದೇ ರೀತಿ, 22 ಕ್ಯಾರಟ್ ಚಿನ್ನದ ಬೆಲೆಯಲ್ಲೂ ಕುಸಿತ ಕಂಡುಬಂದಿದ್ದು, 10 ಗ್ರಾಮ್‌ಗೆ ₹2,150 ಇಳಿಕೆಯಾಗಿದ್ದು, ಪ್ರತಿ ಗ್ರಾಮ್ ಬೆಲೆ ₹13,885 ಆಗಿದೆ.

ಒಂದೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ ಸುಮಾರು ₹2,000 ಇಳಿಕೆ ಕಂಡಿರುವುದು ಮದುವೆ ಮತ್ತು ಶುಭ ಸಮಾರಂಭಗಳಿಗಾಗಿ ಆಭರಣ ಖರೀದಿಸುವವರಿಗೆ ನಿರಾಳತೆ ತಂದಿದೆ.ಇತ್ತ ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡುಬಂದಿದೆ. ನಿನ್ನೆ ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ ₹10,000 ಏರಿಕೆ ಕಂಡಿದ್ದರೆ, ಇಂದು ₹5,000 ಇಳಿಕೆಯಾಗಿದ್ದು, ಪ್ರಸ್ತುತ ಬೆಳ್ಳಿ ಬೆಲೆ ₹2,55,000 ಪ್ರತಿ ಕೆಜಿಗೆ ತಲುಪಿದೆ.

ಜಾಗತಿಕ ಬೆಳವಣಿಗೆಗಳು ಮತ್ತು ಮಾರುಕಟ್ಟೆ ಪರಿಸ್ಥಿತಿಗಳ ಪರಿಣಾಮವಾಗಿ ಚಿನ್ನ–ಬೆಳ್ಳಿ ದರಗಳಲ್ಲಿ ಏರುಪೇರು ಮುಂದುವರಿದಿದ್ದು, ಗ್ರಾಹಕರು ಖರೀದಿಗೆ ಸೂಕ್ತ ಸಮಯವನ್ನು ಗಮನಿಸಿ ನಿರ್ಧಾರ ಕೈಗೊಳ್ಳಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...