Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದಲ್ಲಿ ಬಯಲಾಯ್ತು ಬೃಹತ್ ನಕಲಿ ಪಿಎಚ್‌ಡಿ ಹಗರಣ! 

---Advertisement---

ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಮತ್ತು ಅಮಾನ್ಯ ಪಿಎಚ್‌ಡಿ (PhD) ಪ್ರಮಾಣಪತ್ರಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡಿದ್ದ ಬೃಹತ್ ಹಗರಣವನ್ನು ಕಾಲೇಜು ಶಿಕ್ಷಣ ಇಲಾಖೆ ಬಯಲಿಗೆಳೆದಿದೆ. ವಿಶ್ವವಿದ್ಯಾಲಯಗಳ ಪರಿಶೀಲನೆಯಲ್ಲಿ 249 ಅಭ್ಯರ್ಥಿಗಳ ಪಿಎಚ್‌ಡಿ ಪ್ರಮಾಣಪತ್ರಗಳು ನಕಲಿ ಅಥವಾ ಅಮಾನ್ಯ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ, ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

2025-26ನೇ ಶೈಕ್ಷಣಿಕ ವರ್ಷದ ನೇಮಕಾತಿ ವೇಳೆ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 10 ಸಾವಿರ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ನೇಮಕ ಮಾಡಲಾಗಿತ್ತು. ನೇಮಕಾತಿಯ ಬಳಿಕ ಸರ್ಕಾರದ ಸೂಚನೆಯಂತೆ ಅಭ್ಯರ್ಥಿಗಳ ಸ್ನಾತಕೋತ್ತರ, NET, K-SET, M.Phil ಹಾಗೂ PhD ಸೇರಿದಂತೆ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಪರಿಶೀಲನೆಗಾಗಿ ಸಂಬಂಧಿತ ವಿಶ್ವವಿದ್ಯಾಲಯಗಳಿಗೆ ಕಳುಹಿಸಲಾಗಿತ್ತು.ಪರಿಶೀಲನೆಯ ವೇಳೆ 249 ಅಭ್ಯರ್ಥಿಗಳು ಸಲ್ಲಿಸಿದ್ದ ಪಿಎಚ್‌ಡಿ ಪ್ರಮಾಣಪತ್ರಗಳು ನಕಲಿ ಅಥವಾ ಮಾನ್ಯತೆ ಇಲ್ಲದವು ಎಂದು ವಿಶ್ವವಿದ್ಯಾಲಯಗಳು ವರದಿ ಸಲ್ಲಿಸಿವೆ. ಈ ವರದಿಯ ಆಧಾರದ ಮೇಲೆ ಸಂಬಂಧಪಟ್ಟ ಎಲ್ಲ ಅತಿಥಿ ಉಪನ್ಯಾಸಕರನ್ನು ತಕ್ಷಣದಿಂದಲೇ ಸೇವೆಯಿಂದ ವಜಾಗೊಳಿಸಲಾಗಿದೆ.

ಈ ಹಗರಣದಲ್ಲಿ ಭಾಗಿಯಾಗಿರುವ 249 ಮಂದಿಯ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಿ, ಒಂದು ವಾರದೊಳಗೆ ಪಾಲನಾ ವರದಿ ಸಲ್ಲಿಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಎಲ್ಲಾ ಸರ್ಕಾರಿ ಕಾಲೇಜುಗಳ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದ್ದಾರೆ.ಇದಲ್ಲದೆ, ಈ ಅಭ್ಯರ್ಥಿಗಳನ್ನು 2026-27ನೇ ಶೈಕ್ಷಣಿಕ ವರ್ಷದ ನೇಮಕಾತಿ ಸೇರಿದಂತೆ ಭವಿಷ್ಯದಲ್ಲಿ ನಡೆಯುವ ಯಾವುದೇ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಕಪ್ಪುಪಟ್ಟಿಗೆ (Blacklist) ಸೇರಿಸಲು ಆದೇಶಿಸಲಾಗಿದೆ.

ತನಿಖೆಯಲ್ಲಿ ಬಹಿರಂಗವಾದ ಮಾಹಿತಿಯ ಪ್ರಕಾರ, ವಜಾಗೊಂಡ 249 ಅತಿಥಿ ಉಪನ್ಯಾಸಕರ ಪೈಕಿ 148 ಮಂದಿ ಕಲ್ಯಾಣ ಕರ್ನಾಟಕ ಭಾಗದ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಜಿಲ್ಲಾವಾರು ವಿವರ:
ಕಲಬುರಗಿ – 33
ಯಾದಗಿರಿ – 31
ಬೀದರ್ – 28
ರಾಯಚೂರು – 24
ಕೊಪ್ಪಳ – 13
ವಿಜಯನಗರ – 9
ಬಳ್ಳಾರಿ – 2
ಅದರಲ್ಲೂ ಬೀದರ್ ಜಿಲ್ಲೆಯ ಒಂದೇ ಸರ್ಕಾರಿ ಕಾಲೇಜಿನಲ್ಲಿ 19 ಮಂದಿ ನಕಲಿ ಪಿಎಚ್‌ಡಿ ಪ್ರಮಾಣಪತ್ರಗಳ ಆಧಾರದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಹಗರಣ ಪತ್ತೆಯಾದದ್ದು ಹೇಗೆ?
ನೇಮಕಾತಿಯ ಬಳಿಕ ನಡೆಯುವ ಕಡ್ಡಾಯ ದಾಖಲೆ ಪರಿಶೀಲನಾ ಪ್ರಕ್ರಿಯೆಯಲ್ಲೇ ಈ ಅಕ್ರಮ ಬೆಳಕಿಗೆ ಬಂದಿದೆ. ಮೊದಲ ಹಂತದಲ್ಲಿ ಕಾಲೇಜು ಮಟ್ಟದಲ್ಲಿ ದಾಖಲೆಗಳನ್ನು ಪರಿಶೀಲಿಸಿ, ನಂತರ ಅವುಗಳನ್ನು ದೃಢೀಕರಣಕ್ಕಾಗಿ ವಿಶ್ವವಿದ್ಯಾಲಯಗಳಿಗೆ ಕಳುಹಿಸಲಾಗಿತ್ತು. ವಿಶ್ವವಿದ್ಯಾಲಯಗಳು ನಕಲಿ ಪ್ರಮಾಣಪತ್ರಗಳನ್ನು ಗುರುತಿಸಿದ ಬಳಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಮಿತಿ ಪರಿಶೀಲನೆ ನಡೆಸಿ ವಜಾ ಕ್ರಮಕ್ಕೆ ಆದೇಶ ನೀಡಿದೆ.
ಕೆಲವು ಅಪರೂಪದ ಪ್ರಕರಣಗಳಲ್ಲಿ ಪ್ರಾಂಶುಪಾಲರು ದಾಖಲೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸದ ಹಿನ್ನೆಲೆಯಲ್ಲಿ, ಅಂತಹ ಪ್ರಕರಣಗಳನ್ನು ಮರುಪರಿಶೀಲನೆಗೆ ಒಳಪಡಿಸಲಾಗಿದೆ.
ಈ ಬೆಳವಣಿಗೆ ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಅಕ್ರಮಗಳ ವಿರುದ್ಧ ಸರ್ಕಾರ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now