Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಮಾನವ ಹಕ್ಕು ಆಯೋಗದ ಅಧ್ಯಕ್ಷರ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ವಿಚಾರಣೆ

---Advertisement---

 

 

ಚಿತ್ರದುರ್ಗ. ಮಾರ್ಚ್26 :  ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಇದೇ ಮಾರ್ಚ್ 27ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ವಿಚಾರಣೆ ನಡೆಸಲು ಉದ್ದೇಶಿಸಿದೆ.
ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳಬಹುದು.
ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾರ್ಚ್ 27ರಂದು ಸಾರ್ವಜನಿಕರಿಂದ ದೂರುಗಳು, ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ನಿಗದಿತ ದಿನಾಂಕದಂದು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment