Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ : 44 ಲಕ್ಷ ಸಂಗ್ರಹ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 04 : ತಾಲೂಕಿನ ನಾಯಕನಹಟ್ಟಿ ಐತಿಹಾಸಿಕ ಗುರು- ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಜಾತ್ರೆ ಪ್ರಯುಕ್ತ ಹುಂಡಿ ಹಣದ ಎಣಿಕೆ ಕಾರ್ಯವನ್ನು ಇಂದು ದೇವಾಲಯದ ಆವರಣದಲ್ಲಿ ಬ್ಯಾಂಕ್‌ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳ ಸಹಯೋಗದಲ್ಲಿ ನಡೆಸಲಾಯಿತು.

ವಾರ್ಷಿಕ ಜಾತ್ರೆ ಹಾಗೂ ಮರಿಪರಿಷೆಯ ನಂತರ ಹುಂಡಿ ಹಣದ ಎಣಿಕೆ ಕಾರ್ಯ ಮಾಡಲಾಗುತ್ತದೆ. ಮೊದಲು ಹೊರಮಠ ದೇವಾಲಯದಲ್ಲಿ ಮುಜರಾಯಿ ಹಾಗೂ ಕಂದಾಯ ಇಲಾಖೆಯ ತಹಶೀಲ್ದಾರ್ ಹಾಗೂ ದೇವಾಲಯ ಕಾರ್ಯ ನಿರ್ವಹಣಾಧಿಕಾರಿ ನೇತೃತ್ವದಲ್ಲಿ ದೇವಸ್ಥಾನದ ಹೊರಮಠ ಹಾಗೂ ಒಳ ಮಠ ಏಣಿಕ್ಕೆ ಕಾರ್ಯ ಹಮ್ಮಿಕೊಳ್ಳಲಾಗಿತ್ತು.

ಹೊರಮಠ ಕಾಣಿಕೆ ಹುಂಡಿಯಲ್ಲಿ ಸುಮಾರು 8,33,510, ಒಳಮಠದಲ್ಲಿ 26,71,990 ಹಾಗೂ ದಾಸೋಹದಲ್ಲಿ 8,93,990 ಸಂಗ್ರಹವಾಗಿದೆ. ಒಟ್ಟಾರೆಯಾಗಿ ಈ ವರ್ಷದ ಜಾತ್ರೆಗೆ ಮೊದಲು 43,99,490 ಹಣ ಸಂಗ್ರಹವಾಗಿದೆ. ಸಂಗ್ರಹವಾದ ಹಣವನ್ನು ದೇವಾಲಯದ ಕೆನರಾ ಬ್ಯಾಂಕ್ ಖಾತೆಗೆ ಜಮಾ ಮಾಡಲಾಯಿತು.

ಇನ್ನಿತರೆ ಬೆಳ್ಳಿ ವಸ್ತುಗಳನ್ನು ಕಂದಾಯ ಇಲಾಖೆಗೆ ಒಪ್ಪಿಸಲಾಯಿತು. ಎಂದು ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಮಾಹಿತಿ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment