ರಾಮನಗರಕ್ಕೆ ನಾನು ರಿಯಲ್ ಎಸ್ಟೇಟ್ ಮಾಡೋದಕ್ಕೆ ಬಂದವನಲ್ಲ : ಕುಮಾರಸ್ವಾಮಿ

suddionenews
1 Min Read

ಬೆಂಗಳೂರು: ರಾಮನಗರದಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ನಡೆದ ಘಟನೆ ಇಡೀ ರಾಜ್ಯವೇ ತಲೆತಗ್ಗಿಸುವಂತಿತ್ತು. ಸಂಸದರು, ಸಚಿವರು ಎಂದು ನೋಡದೆ ಜಗಳವಾಡಿಕೊಂಡಿದ್ದರು. ಇದೀಗ ಆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ?.

ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *