ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಅಭ್ಯರ್ಥಿಗಳ ಆಯ್ಕೆ ಕಸರತ್ತು ತೀವ್ರ ಜೋರಾಗಿ ಆರಂಭವಾಗಿದೆ.
ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಹೆಸರು ಇದೀಗ ಮುನ್ನೆಲೆಗೆ ಬಂದಿದೆ.
‘ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆಗೆ ನನ್ನ ಹೆಸರು ಕೇಳಿ ಬರುತ್ತಿದೆ. ಮತ್ತೊಂದು ಜಿಲ್ಲೆಗೆ ಹೋಗಿ ನಾನು ಸ್ಪರ್ಧೆ ಮಾಡುವುದು ಸರಿ ಅಲ್ಲ, ನಾನು ಆಕಾಂಕ್ಷಿಯೂ ಅಲ್ಲ’ ಎಂದು ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.
‘ಭರತ್ ಬೊಮ್ಮಾಯಿ ಸೇರಿ 60 ಮಂದಿ ಸ್ಪರ್ಧೆಗೆ ಅರ್ಜಿ ಹಾಕಿದ್ದಾರೆ. ಆ ಕ್ಷೇತ್ರದಲ್ಲೂ ಪಂಚಮಸಾಲಿ ಸಮಾಜದವರು ಇದ್ದಾರೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಅಲ್ಲಿ ಇದ್ದಾರೆ. ಹೀಗಾಗಿ ಪಕ್ಷದ ನಾಯಕರು ಅಥಾವ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ನಾನು ಅಲ್ಲಿಂದ ಸ್ಫರ್ಧೆ ಬಯಸುವುದಿಲ್ಲ, ಹೈಕಮಾಂಡ್ ಹಾಕುವ ಅಭ್ಯರ್ಥಿಯನ್ನು ಅಂತಿಮವಾಗಿ ಗೆಲ್ಲಿಸಿಕೊಂಡು ಬರುವ ಜವಬ್ದಾರಿ ನಮ್ಮದು, ನಾವು ಆ ಕೆಲಸ ಮಾಡಲಿದ್ದೇವೆ’ ಎಂದು ತಿಳಿಸಿದ್ದಾರೆ.