ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ : ಸಿಎಂ ಸಿದ್ದರಾಮಯ್ಯ ಹಿಂಗ್ಯಾಕಂದ್ರು..?

suddionenews
1 Min Read

ಚಾಮರಾಜನಗರ: ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ವಿಚಾರ ಸಿಕ್ಕಾಪಟ್ಟೆ ಚರ್ಚೆಯಾಗುತ್ತಲೆ ಇದೆ. ಅರ್ಧ ವರ್ಷವಷ್ಟೇ ಸಿಎಂ ಅಂತೆಲ್ಲಾ ಚರ್ಚೆಯಾಗುತ್ತಿದೆ. ಇದರ ಜೊತೆಗೆ ಮೂಡಾ ಹಗರಣ ಕೋರ್ಟ್ ನಲ್ಲಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜಕೀಯದ ಕೊನೆಗಾಲದ ಬಗ್ಗೆ ಮಾತನಾಡಿರುವುದು ಆಶ್ಚರ್ಯ ತರಿಸಿದೆ.

ಇಂದು ಚಾಮರಾಜನಗರ ಜಿಲ್ಲೆಯ ಸತ್ತೇಗಾಲದ ಸರ್ಕಾರಿ ಶಾಲಾ ಕಟ್ಟಡವನ್ನು ಉದ್ಘಾಟನೆ ಮಾಡಲು ಹೋಗಿದ್ದರು‌. ಈ ಶಾಲೆಯನ್ನು ಹಳೆಯ ವಿದ್ಯಾರ್ಥಿಯಾಗಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಮರಿಸ್ವಾಮಿ ನೇತೃತ್ವದಲ್ಲಿ ಹಳೆಯ ವಿದ್ಯಾರ್ಥಿಗಳು ಸೇರಿ ಶಾಲಾ ಕಟ್ಟಡವನ್ನು ನಿರ್ಮಾಣ ಮಾಡಿಸಿದ್ದಾರೆ. ಈ ಕಟ್ಟಡದ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದಾರೆ‌. ಉದ್ಘಾಟನೆಯ ಬಳಿಕ ರಾಜಕೀಯದ ಬಗ್ಗೆ ಮಾತನಾಡಿದ್ದಾರೆ. ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ, ಅಭಿಮಾನ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತೀರಿ ಎಂದಿದ್ದರು. ಜೆ.ಹೆಚ್.ಪಟೇಲರಿಗೆ ಆಗಿನ ಕಾಲದ ಕೆಲವು ಶಾಸಕರು ಹೇಳಿದ್ದರು. ಆಗಿನಿಂದ ಆ ಕಳಂಕ ಚಾಮರಾಜನಗರದ ಮೇಲಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಚಾಮರಾಜನಗರಕ್ಕೆ ಬಂದಿದ್ದೇನೆ. ಈ ಮೂಢ ನಂಬಿಕೆಯನ್ನು ಅವರು ನಂಬಿರಲಿಲ್ಲ, ನಾನು ನಂಬಿಲ್ಲ. ಚಾಮರಾಜನಗರಕ್ಕೆ ಬಂದು ಹೊಸ ಜಿಲ್ಲೆಯನ್ನು ಘೊಇಷಣೆ ಮಾಡಿದ್ದೆವು, ಆಗ ನಾನು ಉಪಮುಖ್ಯಮಂತ್ರಿಯಾಗಿದ್ದೆ.

ನಾನು ಏನಿಲ್ಲ ಅಂದರು ಚಾಮರಾಜನಗರಕ್ಕೆ 20 ಬಾರಿ ಬಂದಿದ್ದೇನೆ. ನಾನು ಚಾಮರಾಜನಗರಕ್ಕೆ ಬಂದಾಗೆಲ್ಲಾ ಖುರ್ಚಿ ಕಳೆದುಕೊಳ್ಳುವ ಬದಲು, ಸಿಎಂ ಖುರ್ಚಿ ಗಟ್ಟಿಯಾಗಿದೆ. ಅತ್ಯಮನತ ಉತ್ಸಾಹದಿಂದ ಶಾಲೆಯನ್ನು ಉದ್ಘಾಟನೆ ಮಾಡಿದ್ದೇನೆ. ಜಾನಪದ ಕಲೆಗಳ ತವರೂರು ಹಾಗೂ ದಕ್ಷಿಣ ಗಡಿ ಈ ಚಾಮರಾಜನಗರ ಎಂದು ಸಿಎಂ ಸಿದ್ದರಾಮಯ್ಯ ಅವರು ಕೊಂಡಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *