Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾನು ಹಿಂದೂ ಆಗಿರುವುದಕ್ಕೆ ಹೆಮ್ಮೆ ಇದೆ : ಬ್ರಿಟಿನ್ ಪ್ರಧಾನಿ ರಿಷಿ‌ ಸುನಕ್

---Advertisement---

 

ನವದೆಹಲಿ: ನಾಳೆಯಿಂದ ರಾಷ್ಟ್ರ ರಾಜಧಾನಿಯಲ್ಲಿ G20 ಶೃಂಗ ಸಭೆ ನಡೆಯಲಿದೆ. ಈಗಾಗಲೇ ದೆಹಲಿಗೆ ಹಲವು ದೇಶಗಳ ಪ್ರಧಾನಿಗಳು ಆಗಮಿಸಿದ್ದಾರೆ. ಪ್ರಧಾನಿಗಳಿಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ ಕೋರಿದ್ದಾರೆ.

ಇನ್ನು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಕೂಡ ಶೃಂಗಸಭೆಗೆ ಆಗಮಿಸಿದ್ದಾರೆ. ಈ ವೇಳೆ ಭಾರತ ಹಾಗೂ ಹಿಂದೂ ಧರ್ಮದ ಬಗ್ಗೆ ಮಾತನಾಡಿದ್ದಾರೆ. ನಾನು ಹಿಂದೂ ಆಗಿರುವುದಕ್ಕೆ ಹೆಮ್ಮೆ ಇದೆ. ಅಂತರಾಷ್ಟ್ರೀಯ ವಿಷಯಗಳ ಬಗ್ಗೆ ಯಾವ ನಿಲುವುಗಳನ್ನು ತೆಗೆದುಕೊಳ್ಳಬೇಕು ಎಂದು ಭಾರತಕ್ಕೆ ಹೇಳುವುದು ನನ್ನ ಕೆಲಸವಲ್ಲ. ಭಾರತವೂ ಅಂತರಾಷ್ಟ್ರೀಯ ಕಾನೂನು ನಿಯಮ, ಯುಎನ್ ಚಾರ್ಟರ್ ಹಾಗೂ ಪ್ರಾದೇಶಿಕ ಸಮಗ್ರತೆಗೆ ಗೌರವದ ಬಗ್ಗೆ ಸರಿಯಾದ ಕಾಳಜಿ ವಹಿಸುತ್ತದೆ ಎಂದು ತಿಳಿಸಿದ್ದಾರೆ.

ಸನಾತನ ಧರ್ಮದ ವಿಚಾರ ಸದ್ದು ಮಾಡುತ್ತಿರುವಾಗ ರಿಷಿ‌ ಸುನಕ್ ಹೆಮ್ಮೆಯಿಂದ ನಾನೊಬ್ಬ ಹಿಂದೂ ಎಂದು ಹೇಳಿಕೊಂಡಿದ್ದಾರೆ. ಹಿಂದೂವಾಗಿಯೇ ಬೆಳೆದಿದ್ದೇನೆ. ಇತ್ತಿಚೆಗೆ ರಕ್ಷಾ ಬಂಧನವನ್ನು ಆಚರಿಸಿದ್ದೇನೆ. ಸಹೋದರಿಯರೆಲ್ಲಾ ರಾಖಿ‌ ಕಟ್ಟಿದ್ದಾರೆ. ಕಾರಣಾಂತರಗಳಿಂದ ಕೃಷ್ಣ ಜನ್ಮಾಷ್ಠಮಿ ಆಚರಿಸಲು ಆಗಿರಲಿಲ್ಲ. ಆದರೆ ಈಗ ಭಾರತದಲ್ಲಿಯೇ ಇರುವುದರಿಂದ ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ ಎಂದಿದ್ದಾರೆ.

ಇನ್ನು ನವದೆಹಲಿ ಶೃಂಗಸಭೆಯಲ್ಲಿ ಭಾಗವಹಿಸುವ ಜಿ 20 ನಾಯಕರು ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ಸಹ ಭೇಟಿ ನೀಡಲಿದ್ದಾರೆ. ಹಾಗಾಗಿ ಸಾಂಪ್ರದಾಯಿಕ ಕಿವಿಯೋಲೆಗಳು ಮತ್ತು ಆಭರಣಗಳು, ಶಾಲುಗಳನ್ನು ಪ್ರದರ್ಶಿಸಲಾಗುವುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment