ರಾಮನಗರ: ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ರಾಜಕಾರಣದಲ್ಲಿ ಅದ್ಯಾಕೋ ಗೆಲುವನ್ನೆ ಕಾಣುತ್ತಿಲ್ಲ. ಎರಡು ಬಾರಿ ಸೋಲು ಕಂಡಿದ್ದಾರೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ನಿಲ್ಲಿಸುತ್ತಾರೆ ಎನ್ನಲಾಗಿತ್ತು. ಆದರೆ ಈಗ ಚನ್ನಪ್ಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ ಎಂದು ಯೋಗೀಶ್ವರ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಪಿ ಯೋಗೀಶ್ವರ್, ಕಳೆದ ವಾರ ನಾನು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೆ. ಈಗಾಗಲೇ ಕಾಂಗ್ರೆಸ್ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಆದಷ್ಟು ಬೇಗ ಮೈತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿ, ಹೆಸರನ್ನು ಸೂಚಿಸಿ ಎಂದೇ. ಆಗ ಹೆಚ್ಡಿಕೆ ಅವರು ನನ್ನನ್ನೇ ನಿಲ್ಲುವಂತೆ ಹೇಳಿದರು. ಅಧಿಕೃತವಾದ ಅನುಮೋದನೆಯನ್ನು ಅವರೇ ಕೊಡಬೇಕು. ಮೈತ್ರಿ ಪಕ್ಷದ ವರಿಷ್ಠರು ಅಧಿಕೃತವಾಗಿ ಘೋಷಣೆ ಮಾಡಬೇಕು. ಹೀಗಾಗಿ ನೀವೆ ಬಂದು ಹೆಸರು ಘೋಷಣೆ ಮಾಡಿ ಎಂದು ಕೇಳಿದ್ದೆ. ಕುಮಾರಸ್ವಾಮಿ ಅವರು ಎನ್ಡಿಎ ಮೈತ್ರಿಯಿಂದ ಗೆದ್ದು ಕೇಂದ್ರ ಸಚಿವರಾಗಿದ್ದಾರೆ. ಬಹಳ ಎತ್ತರದ ಸ್ಥಾನಕ್ಕೆ ಹೋಗಿದ್ದಾರೆ.
ಕುಮಾರಸ್ವಾಮಿ ಅವರು ಚನ್ನಪಟ್ಟಣಕ್ಕೆ ಬಾರದೆ ಹೋಗಿದ್ದರೆ ನಾನು ಸೋಲನ್ನೇ ಕಾಣುತ್ತಿರಲಿಲ್ಲ. ಚನ್ನಪಟ್ಟಣ ಜನತೆ ನನ್ನ ಕಯ ಬಿಡುತ್ತಿರಲಿಲ್ಲ. ನೀವೂ ಬಂದ ಮೇಲೆ ನಮ್ಮ ಸಮುದಾಯ ನಿಮ್ಮ ಕೈ ಹಿಡಿದಿದ್ದು. ಹೀಗಾಗಿ ಕುಮಾರಸ್ವಾಮಿ ಅವರೇ ಬಂದು ಈ ಚುನಾವಣೆಗೆ ಘೋಷಣೆ ಮಾಡಬೇಕು. ತಾಲೂಕಿನ ಜನತೆಯಲ್ಲಿ ಆತಂಕ, ಒತ್ತಡ ಹೆಚ್ಚಾಗುತ್ತಿದೆ. ಹೀಗಾಗಿ ಆದಷ್ಟು ಬೇಗ ಬಂದು ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಬೇಕಿದೆ ಎಂದುಬಸಿಪಿ ಯೋಗೀಶ್ವರ್ ಮನವಿ ಮಾಡಿದ್ದಾರೆ.