Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾನೇ ಸಿಎಂ ಗೊಂದಲದ ನಡುವೆ ಬ್ರೇಕ್ ಫಾಸ್ಟ್ ಮೀಟಿಂಗ್ : ಏನೆಲ್ಲಾ ಚರ್ಚೆಯಾಗಲಿದೆ..?

---Advertisement---

ಬೆಂಗಳೂರು: ಇತ್ತಿಚೆಗೆ ಕಾಂಗ್ರೆಸ್ ನಲ್ಲಿ ನಾನೇ ಸಿಎಂ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಷ್ಟೇ ಅಲ್ಲ ಮನಸ್ತಾಪಗಳಿಗೂ ದಾರಿ ಮಾಡಿಕೊಟ್ಟಿದೆ. ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಕುಳಿತರು ಮಾತನಾಡಿಲ್ಲ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿದ್ದಾರೆ.

ಸಿಎಂ ನಿವಾಸ ಕಾವೇರಿಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಅರೆಂಜ್ ಮಾಡಿದ್ದಾರೆ. ಡಿಕೆ ಶಿವಕುಮಾರ್ 15ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಹಾಜರಾಗಲಿದ್ದಾರೆ. ಎಐಸಿಸಿ ನಾಯಕರು ಕೊಟ್ಟ ಸೂಚನೆಯನ್ನು ಸಚಿವರಿಗೆ ತಿಳಿಸಲು ಈ ಮೀಟಿಂಗ್ ಮಾಡಲಾಗುತ್ತಿದೆ.

ಲೋಕಸಭೆ ಚುನಾವಣೆಗೆ ತಯಾರಿ, ಗ್ಯಾರಂಟಿ ಯೋಜನೆಗಳನ್ನು ಪಡೆಯುತ್ತಿರುವವರಿಗೆ ಇದು ಕಾಂಗ್ರೆಸ್ ಭರವಸೆ ಎಂದು ಮನದಟ್ಟು ಮಾಡುವುದು. ಆಡಳಿತ ಪಕ್ಷದ ಶಾಸಕರ ಬೇಕು – ಬೇಡಗಳ ಬಗ್ಗೆ ಕಿವಿಯಾಗುವುದು. ಗೊಂದಲದ ಹೇಳಿಕೆಗಳಿಗೆ ಬ್ರೇಕ್ ಹಾಕುವುದು ಸೇರಿದಂತೆ ಹಲವು ವಿಚಾರಗಳ ಚರ್ಚೆ ನಡೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment