ತುಮಕೂರು : ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಾ ಇದೆ. ರಾಜ್ಯದ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಜೆಡಿಎಸ್ ಪಕ್ಷವನ್ನು ಈ ಬಾರಿ ಅಧಿಕಾರಕ್ಕೆ ತರಬೇಕೆಂದುಕೊಂಡಿರುವ ಮಾಜಿ ಪ್ರಧಾನಿ ದೇವೇಗೌಡ ಅವರು ಇಂದು ತುಮಕೂರಿನಲ್ಲಿ ಪ್ರಚಾರ ನಡೆಸಿದ್ದಾರೆ. ಮಧುಗಿರಿಯ ಕೈಮರದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ದೇವೇಗೌಡ ಅವರು ಭಾಗಿಯಾಗಿದ್ದರು.
ಈ ವೇಳೆ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನ ಕೆಲ ಮುಖಂಡರಿಂದಾದ ನೋವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು. ನಾನು ಹಿಂದಿನ ಸಂಗತಿಗಳನ್ನು ಮೆಲುಕು ಹಾಕಿ ನೋಡುವುದಕ್ಕೆ ಹೋಗಲ್ಲ. ಚುನಾವಣಾ ರಾಜಕೀಯ ಸಾಕಾಗಿದೆ ಎಂದು ಈ ಹಿಂದೆಯೇ ಹೇಳಿದ್ದೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಅಂದುಕೊಂಡಿರಲಿಲ್ಲ. ಆದರೆ ತುಮಕೂರಿನ ಕೆಲ ಮುಖಂಡರು ನನ್ನನ್ನು ಬಲಿಪಶು ಮಾಡಿದರು ಎಂದು ಬೇಸರ ಹೊರ ಹಾಕಿದರು.
ಇನ್ನು ಮಧುಗಿರಿ ಅಭ್ಯರ್ಥಿ ವೀರಭದ್ರಯ್ಯ ಅವರ ಪರವಾಗಿ ಮತಯಾಚನೆ ಮಾಡಿದರು. ವೀರಭದ್ರಯ್ಯ ಅವರು ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ. ಮಧುಗಿರಿ ಕೂಡ ಒಂದು ಜಿಲ್ಲೆಯಾಗಬೇಕು ಎಂಬುದು ಅವರ ಕನಸು. ಏಕಶಿಲಾ ಬೆಟ್ಟ ಪ್ರವಾಸಿ ತಾಣವಾಗಬೇಕೆಂದು ಕನಸು ಕಂಡಿದ್ದಾರೆ. ಅವರಿಗೆ ನಿಮ್ಮ ಮತ ನೀಡಿ ಎಂದಿದ್ದಾರೆ.





GIPHY App Key not set. Please check settings