ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಕದನ ಸದ್ಯಕ್ಕೆ ಬೂದಿ ಮುಚ್ವಿದ ಕೆಂಡದಂತೆ ಇದೆ. ಆಗಾಗ ಡಿನ್ನರ್, ಬ್ರೇಕ್ ಫಾಸ್ಟ್ ಮೀಟಿಂಗ್ ಅಂತ ಮಾಡ್ತಿದ್ದಾರೆ. ನಿನ್ನೆಯಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ಗಾಗಿ ಎಲ್ಲರೂ ಒಂದು ಕಡೆ ಒಟ್ಟಿಗೆ ಸೇರಿದ್ದಾರೆ. ಇಲ್ಲಿ ಮೀಟಿಂಗ್ ಮಾಡಿದ್ದಾರೆ ಎಂಬ ಸದ್ದು ಜೋರಾಗಿಯೇ ಶುರುವಾಗಿದೆ. ಬೆಳಗ್ಗೆಯಿಂದಾನೂ ಅದರದ್ದೇ ಪ್ರಶ್ನೆಗಳು ಸಹ ಬರ್ತಾ ಇದಾವೆ. ಆ ಬಗ್ಗೆ ಡಿಕೆ ಶಿವಕುಮಾರ್ ಬೇಸರದ ಮಾತುಗಳನ್ನ ಆಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ನಾನು ಯಾವುದೇ ಬಲ ಪ್ರದರ್ಶನ ಮಾಡ್ತಾ ಇಲ್ಲ. ಅದೆ ಅವಶ್ಯಕತೆಯೂ ನನಗಿಲ್ಲ. ಅದರಲ್ಲೂ ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನ ಮಾಡುವ ಅವಶ್ಯಕತೆ ನನಗಿಲ್ಲ. ನನ್ನ ಹಿಂದೆ ಯಾರೂ ಕೂಡ ಬರಬೇಡಿ. ನನ್ನ ಪರವಾಗಿ ಯಾರೂ ಮಾತನಾಡುವುದು ಬೇಡ. ನಾನು ಸಿಎಂ ಸೇರಿದಂತೆ 140 ಶಾಸಕರದ್ದು ಒಂದೇ ಗುಂಪು. ಅದು ಕಾಂಗ್ರೆಸ್ ಗುಂಪು. ಯಾವುದೇ ಗುಂಪು. ಯಾವುದೇ ಗುಂಪುಗಾರಿಕೆ ಅವಕಾಶ ಮಾಡಿಕೊಡಬೇಡಿ.
ನಾನು ಯಾವುದೇ ಡಿನ್ನರ್ ಮೀಟಿಂಗ್ ಮಾಡಿಲ್ಲ. ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಕೂಡ ಹೌದು. ಅವರದ್ದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಮ್ಮ ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುತ್ತದೆಯಾ..? ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು, ಅಷ್ಟೇ. ಅವರಿಗೆ ಗೌರವ ನೀಡುವ ಉದ್ದೇಶದಿಂದ ಅವರ ಮನೆಗೆ ಹೋಗಿದ್ದೆ. ಇದರ ಹೊರತಾಗಿ ಬೇರೇನೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.






