Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವರ ಮೇಲೆ ಭರವಸೆ ಇದೆ : ವಿನಯ್ ಕುಲಕರ್ಣಿ

---Advertisement---

ಬೆಂಗಳೂರು : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ಪ್ರಕಟವಾಗಲಿದೆ. ತೀರ್ಪಿನ ಬಳಿಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರವಾಗಲಿದೆ. ಈ ಸಂಬಂಧ ಮಾತನಾಡಿದ ವಿನಯ್ ಕುಲಕರ್ಣಿ ಅವರು ದೇವರ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೇವರ ಮೇಲೆ ಭರವಸೆ ಇದೆ. ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ ಎಂಬ ನಂಬಿಕೆಯಿದೆ. ಕೋರ್ಟ್ ಮೇಲೆ ಭರವಸೆ ಇದೆ. ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಮಾಧ್ಯಮದ ಮುಂದೆ ಮಾತನ್ನಾಡುವುದು ಸರಿಯಲ್ಲ. ಕೋರ್ಟ್ ತೀರ್ಪು ಪ್ರಕಟಿಸಲಿ ಎಂದಿದ್ದಾರೆ. ಇನ್ನು ರಾಜಕೀಯ ವಿಚಾರದ ಬಗ್ಗೆ ಮಾತನ್ನಾಡುವುದಿಲ್ಲ. 200% ಸತ್ಯಕ್ಕೆ ಯಾವಾಗಲೂ ಜಯ ಸಿಗಲಿದೆ. ಜಯ ಸಿಗಬೇಕಾದರೆ ಕಷ್ಟ ಪಡಬೇಕು ಎಂದರು.

2016ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣ ನಡೆದಿತ್ತು. ಈ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಕೂಡ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ. ಕಳೆದ ಮಾರ್ಚ್ ಕೊನೆಯ ವಾರದಲ್ಲಿ ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಅದರಂತೆ ಏಪ್ರಿಲ್ 2 ರಂದು ಎಲ್ಲರೂ ಲಿಖಿತ ವಾದ ಸಲ್ಲಿಸಿದ್ದರು. ಬಳಿಕ ಏಪ್ರಿಲ್ 9ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಕೋರ್ಟ್ ಸೂಚನೆ ನೀಡಿತ್ತು.

ತೀರ್ಪು ಪ್ರಕಟಣೆಯ ದಿನ ಎಲ್ಲಾ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರನ್ನ 2016ರ ಜೂನ್ 15ರಂದು ಅವರ ಮಾಲೀಕತ್ವದ ಜಿಮ್ ನಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಕುಲಕರ್ಣಿ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಆಗಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ಸೆಪ್ಟೆಂಬರ್ 2019 ರಲ್ಲಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಕೈವಾಡ ಇದೆ ಎಂದು ಆರೋಪಿಸಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...