ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದ ಪವಿತ್ರಾ ಗೌಡ ಸೇರಿದಂತೆ ಹಲವರಿಗೆ ಈಗ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಸುಪ್ರೀಂ ಕೋರ್ಟ್ ಗೆ ರಾಜ್ಯದ ಪೊಲೀಸ್ ಇಲಾಖೆ ಅರ್ಜಿ ಸಲ್ಲಿಕೆ ಮಾಡಿದೆ. ಜಾಮೀನು ರದ್ದುಕೋರಿದೆ. ಇಂದು ಕೂಡ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಪವಿತ್ರಾ ಗೌಡ ಪರ ವಕೀಲರು ಲಿಖಿತ ರೂಪದಲ್ಲಿ ಅಫಿಡೆವಿಟ್ ಸಲ್ಲಿಕೆ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ಗೆ ಪವಿತ್ರಾ ಪರ ವಕೀಲರು ಅಫಿಡವಿಟ್ ಸಲ್ಲಿಕೆ ಮಾಡಿದ್ದಾರೆ. ಲಿಖಿತ ವಾದವನ್ನ ಸಲ್ಲಿಕೆ ಮಾಡಿದ್ದಾರೆ. ವಾದ ಮಂಡಿಸುವಾಗ ಕೊಲೆ ಆರೋಪದಲ್ಲಿ ಪವಿತ್ರಾ ಗೌಎ ಭಾಗಿಯಾಗಿಲ್ಲ. ಆಕೆಗೆ ಮಗಳಿದ್ದಾಳೆ. ಪೋಷಕರನ್ನು ನೋಡಿಕೊಳ್ಳುವ ಜವಾಬ್ದಾರಿ ಇದೆ. ಆಕೆಗೂ ಉಳಿದ ಆರೋಪಿಗಳಿಗೂ ಯಾವುದೇ ಸಂಬಂಧವಿಲ್ಲ. ಆಕೆ ಸಿಂಗಲ್ ಪೇರೆಂಟ್. ಆಕೆಯ ಮಗಳನ್ನ ಆಕೆಯೇ ನೋಡಿಕೊಳ್ಳಬೇಕು ಎಂದು ಪವಿತ್ರಾಗೌಡ ಪರ ವಕೀಲರು ಲಿಖಿತ ರೂಪದಲ್ಲಿ ಮನವಿ ಮಾಡಿದ್ದಾರೆ.
ಪವಿತ್ರಾ ಗೌಡ ತನ್ನ ಜೀವನೋಪಾಯಕ್ಕಾಗಿ ಸ್ಟುಡಿಯೋ ನಡೆಸುತ್ತಿದ್ದಾರೆ. ಆಕೆಯ ಮಗಳನ್ನ ಆಕೆಯೇ ನೋಡಿಕೊಳ್ಳಬೇಕಿದೆ. ಅಷ್ಟೇ ಅಲ್ಲ ವಯಸ್ಸಾದ ತಾಯಿಯನ್ನು ಆಕೆಯೇ ನೋಡಿಕೊಳ್ಳಬೇಕು. ಪವಿತ್ರಾ ಗೌಡಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ. ಹೀಗಾಗಿ ಆಕೆಯ ಮನವಿಯನ್ನು ಮನ್ನಿಸಬೇಕು. ಪವಿತ್ರಾ ಗೌಡಗೂ ಹಾಗೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೂ ಯಾವುದೇ ಸಂಬಂಧವೇ ಇಲ್ಲ ಎಂಬುದನ್ನ ಪವಿತ್ರಾ ಗೌಡ ಪರ ವಕೀಲರು ವಾದ ಮಂಡಿಸಿದ್ದಾರೆ. ಎರಡು ಕಡೆಯ ವಾದ ಪ್ರತಿವಾದವನ್ನು ಕೇಳಿರುವ ಸುಪ್ರೀಂ ಕೋರ್ಟ್ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನ ನೋಡಬೇಕಿದೆ.






