Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಿಕ್ಷಣ ಸಚಿವನಾಗಿ 125 ದಿನಗಳಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇನೆ : ಸಚಿವ ಮಧು ಬಂಗಾರಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.21  : ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಬಂಗಾರಪ್ಪನವರು ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದರು. ಅದೆ ರೀತಿ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಯ ಪರವಾಗಿ ನಿರ್ಧಾರ ತೆಗೆದುಕೊಂಡಿರುವುದರಿಂದ ನಾವುಗಳೆಲ್ಲಾ ಅವರ ಜೊತೆ ನಿಲ್ಲುತ್ತೇವೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಎರಡು ರಾಜ್ಯಗಳಿಗೆ ಸಮಾಧಾನವಾಗುವ ರೀತಿ ನಿರ್ಧಾರ ತಾಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತ 1991 ರಲ್ಲಿ ರಾಜ್ಯದ ಜಲಾಶಯಗಳಲ್ಲಿ ನೀರಿರಲಿಲ್ಲ. ಈಗ ಅದಕ್ಕಿಂತಲೂ ಪರಿಸ್ಥಿತಿ ಕೆಟ್ಟದಾಗಿದೆ. ಕೇಂದ್ರ ಸರ್ಕಾರ ವಾಸ್ತವವನ್ನು ತಿಳಿದುಕೊಳ್ಳಬೇಕು. ಅನೇಕ ಮುಖ್ಯಮಂತ್ರಿಗಳು ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗುವುದು ಅಂದಿನಿಂದಲೂ ನಡೆದುಕೊಂಡು ಬರುತ್ತಿದೆ. ವಿವಾದ ಕೋರ್ಟ್‍ನಲ್ಲಿದೆ ಎಂದರು.

ನಾನು ಶಿಕ್ಷಣ ಸಚಿವನಾಗಿ ಅಧಿಕಾರ ತೆಗೆದುಕೊಳ್ಳುವಾಗ 53 ಸಾವಿರ ಶಿಕ್ಷಕರ ಕೊರತೆಯಿತ್ತು. 43 ಸಾವಿರ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಂಡಿದ್ದೇವೆ. ಹದಿಮೂರು ಸಾವಿರ ಶಿಕ್ಷಕರಿಗೆ ಆರ್ಡರ್ ಕೊಡಬೇಕು. ಪಠ್ಯಪುಸ್ತಕ ಪರಿಷ್ಕರಣೆ, ಒಂದು ವರ್ಷಕ್ಕೆ ಮೂರು ಪರೀಕ್ಷೆ ಇಂತಹ ಮಹತ್ವದ ನಿರ್ಧಾರಗಳನ್ನು 125 ದಿನಗಳಲ್ಲಿ ತೆಗೆದುಕೊಂಡಿದ್ದೇನೆ. ರಾಜ್ಯದ ಜನ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮಕ್ಕಳಿಗೆ ಮೂಲಭೂತ ಸೌಲಭ್ಯ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಹೆಚ್ಚು ತೆರೆಯಲಾಗುವುದು. ಮುಂದಿನ ದಿನಗಳಲ್ಲಿ ಶಿಕ್ಷಕರುಗಳ ಕೊರತೆಯನ್ನು ನೀಗಿಸುವುದಕ್ಕಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಈ ಸಂಬಂಧ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದೇನೆಂದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment