Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯರನ್ನ ಹಣಕಾಸು ಮಂತ್ರಿ ಮಾಡಿದ್ದೆ ನಾನು : ದೇವೇಗೌಡ

---Advertisement---

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ನಿಂದಾ‌ನೇ ಕಾಂಗ್ರೆಸ್ ಗೆ ಬಂದವರು. ಜೆಡಿಎಸ್ ನಲ್ಲಿದ್ದಾಗ ಹಣಕಾಸು ಮಂತ್ರಿಯಾಗಿದ್ದರು. ಅದನ್ನ ಮಾಜಿ ಪ್ರಧಾನಿ ದೇವೇಗೌಡ ಅವರು ನೆನೆದಿದ್ದಾರೆ. ಇಂದು ಜೆಡಿಎಸ್ ಪಕ್ಷಕ್ಕೆ 25 ವರ್ಷಗಳು ತುಂಬಿದ ಸಂಭ್ರಮ. ಹೀಗಾಗಿ ಜೆಪಿ ಭವನದಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಈ ವೇಳೆ ದೇವೇಗೌಡರು ಮಾತನಾಪಡುತ್ತಾ, ಸಿದ್ದರಾಮಯ್ಯ ಅವರು ಆರೋಪ ಮಾಡುವಾಗ ನಾಲಿಗೆ ಮೇಲೆ ಹಿಡಿತ ಇರಲಿ ಎಂದೇ ಆಕ್ರೋಶ ಹೊರ ಹಾಕಿದ್ದಾರೆ.

ಸಿದ್ದರಾಮಯ್ಯ ಅವರು ನಾನು ಜೆಡಿಎಸ್ ನಲ್ಲಿಯೇ ಇದ್ದಿದ್ರೆ ಮುಖ್ಯಮಂತ್ರಿ ಆಗಲು ಬಿಡುತ್ತಿರಲಿಲ್ಲ ಎಂಬ ಸಿದ್ದರಾಮಯ್ಯ ಅವರ ಮಾತಿಗೆ ತಿರುಗೇಟು ನೀಡಿದ ದೇವೇಗೌಡ ಅವರು, ಸಿದ್ದರಾಮಯ್ಯ ಅವರನ್ನು ಹಣಕಾಸು ಮಂತ್ರಿ ಮಾಡಿದ್ದೆ ನಾನು. ಅವರನ್ನು ಸಿಎಂ ಮಾಡಿ ಎಂದು ಹೇಳಿದ್ದೆ ಎಂದಿದ್ದಾರೆ. ಕುಮಾರಸ್ವಾಮಿ ಅವರು ಕೂಡ ಎರಡು ಬಾರಿ ಸಿಎಂ ಆದಾಗ ಆಗುದ್ದೆಲ್ಲವನ್ನು ಮೆಲುಕು ಹಾಕಿದರು.

ಇನ್ನು 2028ಕ್ಕೆ ಕುಮಾರಸ್ವಾಮಿಯನ್ನು ಮತ್ತೆ ಸಿಎಂ ಮಾಡುವ ಸಂಕಲ್ಪಗೈಯ್ಯಲಾಯ್ತು. ದೇವೇಗೌಡ ಅವರು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ಭರವಸೆಯನ್ನ ನೀಡಿದರು. ಜೆಡಿಎಸ್ ರಾಷ್ಟ್ರೀಯ ಮಹಾ ಅಧಿವೇಶನ ಇದಾಗಿದೆ. ಪ್ರಾದೇಶಿಕ ಪಕ್ಷ ಜೆಡಿಎಸ್​ಗೆ ಬೆಳ್ಳಿ ಹಬ್ಬದ ಸಂಭ್ರಮ ಇಂದು. ಜೆಪಿ ಭವನದಲ್ಲಿ ಹಸಿರು ಕಹಳೆ ಮೊಳಗಿತ್ತು. ಕರ್ನಾಟಕ, ಆಂಧ್ರ, ತಮಿಳುನಾಡು ಸೇರಿ ವಿವಿಧ ರಾಜ್ಯಗಳ ಜೆಡಿಎಸ್ ನಾಯಕರ ಸಮಾಗಮವಾಗಿತ್ತು. 25 ಸಂವತ್ಸರಗಳನ್ನು ಪೂರೈಸಿರುವ ತೆನೆ ಪರಿವಾರದಲ್ಲಿ ಸಂಭ್ರಮ ಸಡಗರ ಮೂಡಿತ್ತು. ಎಲ್ಲರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now