Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜೆಡಿಎಸ್ ಸಪೋರ್ಟ್ ಮಾಡಲು ಹೇಳಿದ್ದೆ.. ಆದ್ರೆ ಆಯಮ್ಮ‌ನ್ನ ಗೆಲ್ಲಿಸಿದ್ರು : ಸುಮಲತಾ ವಿರುದ್ಧ ಸಿದ್ದು ಕಿಡಿ

---Advertisement---

 

ಮಂಡ್ಯ: ಮತದಾನಕ್ಕೆ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಹೀಗಾಗಿ ರಾಜಕೀಯ ಪಕ್ಷಗಳು ಜೋರು ಪ್ರಚಾರದಲ್ಲಿ ತೊಡಗಿವೆ. ಸಿದ್ದರಾಮಯ್ಯ ಇಂದು ನಾಗಮಂಗಲದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ಸುಮಲತಾ ವಿರುದ್ಧ ಹಾಗೂ ಪ್ರಧಾನಿ ಮೋದಿ ವಿರುದ್ಧ ಕೆಂಡಕಾರುತ್ತಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ ಅಭ್ಯರ್ಥಿ ಪರ ನಿಲ್ಲುವಂತೆ ಹೇಳಿದ್ದೆ. ಆದರೆ ಜನ ನನ್ನ ಮಾತು ಕೇಳಲಿಲ್ಲ. ಆಯಮ್ಮನ್ನ ಗೆಲ್ಲಿಸಿದ್ರು. ಅದು ಸರಿಯಲ್ಲ ಅಂತ ನಂಗೆ ಇವಾಗ ಅನ್ನಿಸ್ತಾ ಇದೆ. ಚೆಲುವರಾಯಸ್ವಾಮಿ, ನರೇಂದ್ರ ಎಲ್ಲರಿಗೂ ಜೆಡಿಎಸ್ ಪರ ನಿಲ್ಲುವಂತೆ ಹೇಳಿದ್ದೆ. ಆದ್ರೆ ಜನ ನನ್ನ ಮಾತನ್ನು ಕೇಳಲೇ ಇಲ್ಲ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರ ಭ್ರಷ್ಟಚಾರದಲ್ಲಿ ಮುಳುಗಿ ಹೋಗಿದೆ. ಬೀದಿ ಬೀದಿಯಲ್ಲಿ ಭ್ರಷ್ಟಚಾರದ ವಿಚಾರ ಚರ್ಚೆಯಾಗ್ತಿದೆ. ವಿಧಾನಸೌಧದ ಪ್ರತಿಗೋಡೆಗಳೂ ದುಡ್ಡು ದುಡ್ಡು ಅನ್ನುತ್ತಿವೆ. ಇಂತಹ 40 ಪರ್ಸೆಂಟ್ ಸರ್ಕಾರ ಇರಬೇಕಾ? ಮೋದಿ ಅಚ್ಚೇದಿನ್ ಆಯೇಗಾ ಅಂತಾರಲ್ಲ, ನಿಮಗೇನಾದ್ರು ಅಚ್ಚೇದಿನ್‌ ಬಂತೇನ್ರಪ್ಪ.? ಎಂದು ಪ್ರಶ್ನಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...