Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್.ಎಸ್.ಎಲ್.ಸಿ.ಫಲಿತಾಂಶದಲ್ಲಿ ಚಿತ್ರದುರ್ಗ ರಾಜ್ಯಕ್ಕೆ ಒಂದನೇ ಸ್ಥಾನದಲ್ಲಿರಬೇಕೆಂಬುದು ನನ್ನ ಆಸೆ : ಕೆ.ರವಿಶಂಕರ್‌ ರೆಡ್ಡಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.31): ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದುದು. ಸಮಯವನ್ನು ವ್ಯರ್ಥಮಾಡದೆ ಹೆಚ್ಚು ಅಧ್ಯಯನದಲ್ಲಿ ತೊಡಗಿಕೊಳ್ಳುವ ಮೂಲಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್‌ ರೆಡ್ಡಿ ಕರೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದೊಂದಿಗೆ ಎಸ್.ಎಸ್.ಎಲ್.ಸಿ. ಫಲಿತಾಂಶ ಉತ್ತಮಪಡಿಸುವುದಕ್ಕಾಗಿ ಮಹಾರಾಣಿ ಕಾಲೇಜಿನ ವಾಲ್ಮೀಕಿ ಸಭಾಂಗಣದಲ್ಲಿ ಮಂಗಳವಾರ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಳೆದ ಬಾರಿ ಚಿತ್ರದುರ್ಗ ಜಿಲ್ಲೆ ಎಸ್.ಎಸ್.ಎಲ್.ಸಿ.ಫಲಿತಾಂಶದಲ್ಲಿ ನಾಲ್ಕನೆ ಸ್ಥಾನದಲ್ಲಿತ್ತು. ಈ ಬಾರಿ ರಾಜ್ಯಕ್ಕೆ ಒಂದನೆ ಸ್ಥಾನದಲ್ಲಿರಬೇಕೆಂಬುದು ನನ್ನ ಆಸೆ. ಹಾಗಾಗಿ ಎ.ಪಿ.ಜೆ.ಅಬ್ದುಲ್ ಕಲಾಂರವರನ್ನು ಆದರ್ಶವಾಗಿಟ್ಟುಕೊಂಡು ಜೀವನದಲ್ಲಿ ಗುರಿ ಸಾಧಿಸಿ ಎಂದು ಮಕ್ಕಳಿಗೆ ತಿಳಿಸಿದರು.

ವಿಜ್ಞಾನ ವಿಷಯದಲ್ಲಿ ಶೇ.ನೂರಕ್ಕೆ ನೂರು ಅಂಕಗಳನ್ನು ತೆಗೆಯಬೇಕು. ಅದಕ್ಕಾಗಿ ಕಠಿಣ ಪರಿಶ್ರಮದಲ್ಲಿ ತೊಡಗಬೇಕು ಎಂದು ಹತ್ತನೆ ತರಗತಿ ಮಕ್ಕಳನ್ನು ಪ್ರೋತ್ಸಾಹಿಸಿದರು.
ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಕೊಡುವ ಮೂಲಕ ಜಿಲ್ಲೆಗೆ ಉತ್ತಮ ಫಲಿತಾಂಶ ತಂದುಕೊಡಬೇಕು. ದಿನಕ್ಕೆ ಎರಡು ಅಂಕಗಳ ಎರಡು ಪ್ರಶ್ನೆಯನ್ನು ಕಲಿಯಬೇಕು. ನಂತರ ನೀವುಗಳು ಓದಿದ ವಿಷಯ ಕುರಿತು ಶಿಕ್ಷಕರುಗಳಲ್ಲಿ ಚರ್ಚಿಸಿ ಏನಾದರೂ ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಬೇಕು. ಪ್ರತಿನಿತ್ಯವು ನೀವುಗಳು ಓದಿದ್ದನ್ನು ಬರೆಯುವ ಅಭ್ಯಾಸ ರೂಢಿಸಿಕೊಂಡು ರಾತ್ರಿ ಮಲಗುವಾಗ ಅಂದು ಕಲಿತ ಪಾಠಗಳನ್ನು ಮೆಲಕು ಹಾಕಬೇಕು. ಈ ಮೂರು ಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಎಲ್ಲರೂ ಹತ್ತನೆ ತರಗತಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು.

ವಿದ್ಯಾಧಿಕಾರಿ ಮಂಜುನಾಥ್ ಮಾತನಾಡುತ್ತ ಓದಿನ ಮಹತ್ವ ಹಾಗೂ ಸರಳ ಸೂತ್ರಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಮನವರಿಕೆ ಮಾಡಿ ಓದಿದ್ದನ್ನು ಯಾವ ರೀತಿ ಚಿಂತನ ಮಂಥನ ಮಾಡಿಕೊಳ್ಳಬೇಕೆಂಬುದನ್ನು ಮಕ್ಕಳಿಗೆ ಹೇಳಿಕೊಟ್ಟರು.

ಸಂವಾದದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ಮುಖ್ಯ ಶಿಕ್ಷಕ ಕೆ.ಎನ್.ಮಹೇಶ್, ಬಸ್ವಂತ್ ಕುಮಾರ್ ಇವರುಗಳು ವಿಜ್ಞಾನ ಗಣಿತ ವಿಷಯಗಳ ಅಧ್ಯಯನ ಕುರಿತು ಮಾತನಾಡುತ್ತ ಪರೀಕ್ಷೆಯಲ್ಲಿ ಹೇಗೆ ಉತ್ತಮ ಅಂಕಗಳನ್ನು ಗಳಿಸಬಹುದು ಎನ್ನುವುದನ್ನು ಮಕ್ಕಳಿಗೆ ಮನವರಿಕೆ ಮಾಡಿದರು.

ಮಹಾರಾಣಿ ಪ್ರೌಢಶಾಲೆ, ವಾಸುದೇವರೆಡ್ಡಿ ಪ್ರೌಢಶಾಲೆ, ಎ.ಭೀಮಪ್ಪ ನಾಯಕ ಸಂಯುಕ್ತ ಪ್ರೌಢಶಾಲೆ, ಸದ್ಗುರು ಕಬೀರಾನಂದ ಪ್ರೌಢಶಾಲೆ, ಬರಗೇರಮ್ಮ ಪ್ರೌಢಶಾಲೆ, ಕೋಟೆ ಸರ್ಕಾರಿ ಪ್ರೌಢಶಾಲೆ ಮಕ್ಕಳು ಹಾಗೂ ಶಿಕ್ಷಕರುಗಳು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆಯಲ್ಲಿ ಭೀಕರ ಅಪಘಾತ : ಸಿರಿಗೆರೆ ವೈದ್ಯ ಡಾ.ತಿಮ್ಮೇಗೌಡ ಸಾವು

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಸ್ಥಳದಲ್ಲೇ ಸಾವನಪ್ಪಿದ್ದಾರೆ. ದಾವಣಗೆರೆ ಹೊರವಲಯದ ಬಾಡ ಕ್ರಾಸ್

ನಿಖಿಲ್ ಸೋಲಿನ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಫಸ್ಟ್ ರಿಯಾಕ್ಷನ್..!

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿಪಿ ಯೋಗೀಶ್ವರ್ ಗೆದ್ದು ಬೀಗಿದ್ದಾರೆ. ನಿಖಿಲ್ ಮೂರನೇ ಬಾರಿಗೂ ಸೋಲು ಕಂಡಿದ್ದಾರೆ. ಒಂದು ಕಾಲದಲ್ಲಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್ ಬದ್ಧ ವೈರಿಗಳಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಯಾವಾಗ

ಕನ್ನಡ ಭಾಷೆಗೆ ಮೊದಲ ಪ್ರಾಶಸ್ತ್ಯ ನೀಡಿ : ಲೇಖಕ ಯೋಗೀಶ್ ಸಹ್ಯಾದ್ರಿ

  ಸುದ್ದಿಒನ್, ಚಿತ್ರದುರ್ಗ, ನ. 23 : ಕನ್ನಡಿಗರು ಎಷ್ಟೇ ಭಾಷೆಗಳನ್ನು ಕಲಿತರೂ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು. ಭಾರತದ ನೆಲದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ವಿಶಿಷ್ಟ ಸ್ಥಾನಮಾನವಿದೆ ಎಂದು ಲೇಖಕ ಹಾಗೂ

error: Content is protected !!