Connect with us

Hi, what are you looking for?

ಪ್ರಮುಖ ಸುದ್ದಿ

ನಾನು ಸಿಎಂ ಆಗ್ಬೇಕು..ಮನದ ಮಾತು ಜನರ ಮುಂದಿಟ್ಟ ಉಪ್ಪಿ

ಬೆಂಗಳೂರು : ಸ್ಯಾಂಡಲ್‍ವುಡ್‍ನ ರಿಯಲ್ ಸ್ಟಾರ್ ಸಿಎಂ ಆಗ್ತಾರಾ? ಎಂಬ ಪ್ರಶ್ನೆಯನ್ನು ನಟ ಉಪೇಂದ್ರ ಅವರು ಪೋಸ್ಟ್ ಮಾಡಿರುವ ಟ್ವಿಟರ್ ಹುಟ್ಟು ಹಾಕಿದೆ. ಜತೆಗೆ ಸೋಷಿಯಲ್ ಮೀಡಿಯಾದಲ್ಲಿ ಬಹು ಚರ್ಚಿತ ವಿಷಯಾಗಿದೆ.

ಉಪ್ಪಿ ಟ್ವೀಟ್ ಹೀಗಿದೆ ನೋಡಿ
“ನಾನು ಉಪೇಂದ್ರ, ಈ ರಾಜ್ಯದ ಮುಖ್ಯಮಂತ್ರಿ (CM) ಆಗ್ಬೇಕು, ನಾನು ಚುನಾವಣೇಲಿ ಸ್ಪರ್ಧಿಸಿದರೆ? ನೀವು ನನ್ನನ್ನು ಗೆಲ್ಲಿಸ್ತೀರಾ?”

“ನೋಡಿ, ನಾನು ಸಮಾಜ ಸೇವೆ ಮಾಡ್ತಿದೀನಿ. ರೈತರಿಂದ ಬೆಳೆ ಕೊಂಡು ಉಚಿತವಾಗಿ ಕಷ್ಟದಲ್ಲಿರೋರಿಗೆ ಹಂಚ್ತಿದೀನಿ. ಚುನಾವಣೆ ಸಮಯದಲ್ಲಿ ಹೋರಾಟನೂ ಮಾಡ್ತೀನಿ. ಆಡಳಿತ ಪಕ್ಷ, ವಿರೋಧ ಪಕ್ಷದ ಜನರಿಗೆ ಏನೂ ಮಾಡದೆ ಸಂಪೂರ್ಣ ವಿಫಲ ಆಗಿದೆ ಅಂತ ಮಾಧ್ಯಮದಲ್ಲಿ ಕೂಗಿ ಹೇಳ್ತೀನಿ. ಇವರನ್ನೆಲ್ಲಾ ಕಿತ್ಹಾಕಿ ನನಗೆ ಒಂದು ಅವಕಾಶ ಕೊಡಿ. ನಿಮ್ಮ ಮುಂದಿನ ಉಜ್ವಲ ಭವಿಷ್ಯಕ್ಕೆ ನಾನು ಕೆಲಸ ಮಾಡ್ತೀನಿ. ಹಗಲು-ರಾತ್ರಿ ಕಷ್ಟಪಟ್ಟು ಸುವರ್ಣ ಕರ್ನಾಟಕ ಮಾಡ್ತೀನಿ” ಎಂದು ಉಪ್ಪಿ ಭರವಸೆ ನೀಡಿದ್ದಾರೆ.

“ನಾನು ಎಲೆಕ್ಷನ್‍ಗೆ ನಿಲ್ಲಲ್ಲ. ಹಾಗಾದ್ರೆ ಉತ್ತಮ ಪ್ರಜಾಕೀಯ ಪಕ್ಷ ಯಾಕೆ ಅಂತ ಕೇಳ್ತೀರಾ?, ಪ್ರಜಾಕೀಯದಲ್ಲಿ ನಿಮಗೆ ಗೊತ್ತಿಲ್ಲದಿರೋ ಸಾಮಾನ್ಯರು ಚುನಾವಣೆಗೆ ನಿಲ್ತಾರೆ. ಬರೀ ಪ್ರಜಾಕೀಯ ವಿಚಾರ ತಿಳ್ಕೊಂಡು ವೋಟ್ ಹಾಕಿ ಅವರಿಗೆ ಕೆಲಸ ಕೊಟ್ರೆ ನಿಮ್ ಜೊತೆ ನಿರಂತರ ಸಂಪರ್ಕದಲ್ಲಿದ್ದು, ನಿಮಗೆ ಬೇಕಾದ ಕೆಲಸ, ಪೈಸೆ ಪೈಸೆ ಲೆಕ್ಕ ಕೊಟ್ಟು ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ತಾರೆ. ಪ್ರಜಾಕೀಯದ ಕಾರ್ಯವೈಖರಿ ತರ ಕೆಲಸ ಮಾಡ್ಲಿಲ್ಲ ಅಥವಾ ನಿಮಗೆ ಅವನ/ಅವಳ ಕೆಲಸ ಇಷ್ಟ ಆಗ್ಲಿಲ್ಲ ಅಥವಾ ಹಣ, ಅಧಿಕಾರದ ಆಸೆಗೆ ಬೇರೆ ಪಕ್ಷದ ಜೊತೆ ಜಂಪ್ ಆಗೋಕೆ ಹೋದ್ರೆ ನಾನು ಉಪೇಂದ್ರ ಅಒ ಆಗಿ ನಿಮ್ ಜೊತೆ ನಿಲ್ತೀನಿ. ಈ ವ್ಯವಸ್ಥೆ ಸರಿ ಹೋಗೋಕೆ ಎರಡು ಎಲೆಕ್ಷನ್ ಜಾಸ್ತಿ ಆಗ್ಲಿ. ಅದಕ್ಕೆ ನಿಮ್ ಜೊತೆ ನಾನು ಯಾವಾಗ್ಲೂ ಇರೋ Peಡಿmಚಿಟಿeಟಿಣ ಅಒ (ಕಾಮನ್ ಮೆನ್) ಜನ ಸಾಮಾನ್ಯ? ಇಲ್ಲ ಇಲ್ಲ, ಜನ ಅಸಾಮಾನ್ಯರಲ್ಲಿ ಒಬ್ಬನಾಗಿರ್ತೀನಿ. ಸರೀನಾ?” ಎಂದಿದ್ದಾರೆ.

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಜನರಲ್ಲಿ ಹೊಸ ಆಲೋಚನೆಯೊಂದನ್ನು ಹುಟ್ಟು ಹಾಕಿದ್ದಾರೆ. ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕು.

Click to comment

Leave a Reply

Your email address will not be published. Required fields are marked *

Latest

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

ಪ್ರಮುಖ ಸುದ್ದಿ

ಬೆಂಗಳೂರು :ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೊನೆ ಕ್ಷಣದಲ್ಲಿ ತನ್ನ ಪಾಳಯದ ಬಸವರಾಜ್ ಬೊಮ್ಮಾಯಿ ಅವರಿಗೆ ಪಟ್ಟ ಕಟ್ಟಿ ಇದೀಗ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ ಬಿ.ಎಸ್.ಯಡಿಯೂರಪ್ಪ. ದೆಹಲಿಯಲ್ಲಿ ಸಚಿವ ಸಂಪುಟ ಕಸರತ್ತು...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!