Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಅಭಿವೃದ್ಧಿಗೆ ಅಗತ್ಯ ಅನುದಾನ : ಸಚಿವ ಯು.ಟಿ. ಖಾದರ್ ಭರವಸೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 06 : ಜಿಲ್ಲೆಯ ಅಭಿವೃದ್ದಿಗೆ ಸರ್ಕಾರದಿಂದ ಅನುದಾನ ಕೊಡಿಸುವ ಕೆಲಸ ಮಾಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಇಲಾಖೆ ಹಾಗೂ ಹಜ್, ವಕ್ಫ್ ಖಾತೆ ಸಚಿವ ಯು.ಟಿ.ಖಾದರ್ ಭರವಸೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಐದು ಉಚಿತ ಗ್ಯಾರೆಂಟಿಗಳನ್ನು ನೀಡಿದ್ದನ್ನು ಬಿಜೆಪಿ.ಯವರು ಟೀಕಿಸಿದರು. ರಾಜ್ಯದ ಸಂಪತ್ತು ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕೆಂಬುದು ನಮ್ಮ ಪಕ್ಷದ ಧ್ಯೇಯ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದ ಮೇಲೆ ಹಲವಾರು ಯೋಜನೆಗಳನ್ನು ಕೊಟ್ಟಿದ್ದಾರೆ. ಹಿರಿಯೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ದೊಡ್ಡ ಜವಾಬ್ದಾರಿ ಕಾರ್ಯಕರ್ತರು ಹಾಗೂ ಮುಖಂಡರುಗಳ ಮೇಲಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಎಂದು ಕರೆ ನೀಡಿದರು.

1969 ಎಲ್ಲಿ ಕಾಂಗ್ರೆಸ್ ಇಬ್ಬಾಗವಾಯಿತು. ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ 20 ಅಂಶಗಳ ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತಂದಿದ್ದರಿಂದ ಬಡವರಿಗೆ
ಅನುಕೂಲವಾಯಿತು. ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸುರವರು 1972 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಲು ಪಕ್ಷ ಕಾರಣ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಶೋಷಿತರ ಪರವಾಗಿ ಕಾಂಗ್ರೆಸ್ ಸದಾ ಶ್ರಮಿಸುತ್ತಿದೆ. ನಮ್ಮ ಸರ್ಕಾರದ ಸಾಧನೆಗಳನ್ನು ಕಂಡು ಕೋಮುವಾದಿ ಬಿಜೆಪಿ.ಗೆ ಸಹಿಸಿಕೊಳ್ಳಲು ಆಗದೆ ವಿನಾ ಕಾರಣ ಆರೋಪ ಹೊರಿಸುತ್ತಿದ್ದಾರೆಂದು ವಿರೋಧಿಗಳಿಗೆ ತಿರುಗೇಟು ನೀಡಿದರು.
ರಾಜೀವ್‍ಗಾಂಧಿ ದೇಶದ ಪ್ರಧಾನಿಯಾಗಿದ್ದಾಗ ಹದಿನೆಂಟು ವರ್ಷದ ಯುವಕ-ಯುವತಿಯರಿಗೆ ಮತದಾನದ ಹಕ್ಕು ನೀಡಿದರು. ಆಗಲು ಬಿಜೆಪಿ. ಸುಮ್ಮನಿರಲಿಲ್ಲ. ಕಲರ್
ಟಿವಿ, ಕಂಪ್ಯೂಟರ್, ಮೊಬೈಲ್ ಫೋನ್‍ಗಳು ಬಂದಿದ್ದು, ಕಾಂಗ್ರೆಸ್ ಕಾಲದಲ್ಲಿ ಎನ್ನುವುದನ್ನು ವಿರೋಧಿಗಳು ಮರೆಯಬಾರದೆಂದು ಎಚ್ಚರಿಸಿದರು.

ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಉಪಾಧ್ಯಕ್ಷರುಗಳಾದ ನಜ್ಮತಾಜ್, ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಮುನಿರಾ ಎ.ಮಕಾಂದಾರ್, ಸೈಯದ್ ಮೋಹಿದ್ದೀನ್, ಮುದಸಿರ್‍ನವಾಜ್, ಸೈಯದ್ ಸೈಫುಲ್ಲಾ, ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now