ಆ ಅಧಿಕಾರಿಗಳ ವಿರುದ್ಧ ದೂರು ದಾಖಲಿಸುತ್ತೇನೆ : ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಕೆಂಡಾಮಂಡಲ..!

suddionenews
1 Min Read

ಚಿಕ್ಕಬಳ್ಳಾಪುರ: ಚುನಾವಣೆಯಲ್ಲಿ ಗೆದ್ದ ಮೇಲೆ ಶಾಸಕ ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರದಲ್ಲಿ ಫುಲ್ ಆಕ್ಟೀವ್ ಆಗಿದ್ದಾರೆ. ಅಧಿಕಾರಿಗಳ ಸಭೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದಾರೆ. ಇಂದು ನಡೆದ ಸಭೆಯಲ್ಲಿ ಪ್ರದೀಪ್ ಈಶ್ವರ್ ಕೊಂಚ ಗರಂ ಆಗಿದ್ದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲು ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಯಾವುದೇ ರಾಜಕೀಯ ಒತ್ತಡವಿಲ್ಲದೆ ಕೆಲಸ ಮಾಡಿ. ಯಾರ ಒತ್ತಡಕ್ಕೂ ಮಣಿಯಬೇಡಿ. ನನ್ನ ಫಾಲೋವರ್ಸ್ ಆಗಲೀ, ರಾಜಕೀಯ ನಾಯಕರಾಗಲಿ, ನಾನು ಹೇಳುವ ತನಕ ಯಾರ ಮಾತು ಕೇಳಬೇಡಿ. ನ್ಯಾಯಯುತವಾಗಿ ಜನರ ಪರ ಕೆಲಸ ಮಾಡಿ. ಈ ಹಿಂದೆ ಚಿಕ್ಕಬಳ್ಳಾಪುರ ಜನತೆಗೆ ಹಕ್ಕುಪತ್ರ ಹಂಚಲಾಗಿತ್ತು‌.

ಹಕ್ಕುಪತ್ರಗಳನ್ನು ಸ್ವತಃ ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿ ಡಾ. ಸಂತೋಷ್ ಕುಮಾರ್ ಹಾಗೂ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಸೇರಿದಂತೆ ಹಲವು ಅಧಿಕಾರಿಗಳು ಹಂಚಿದ್ದರು. ಅದು ಸುಧಾಕರ್ ಅವರು ಸಚಿವರಾಗಿದ್ದಾಗ ಹಂಚಿದ್ದಾರೆ. ಅನಧಿಕೃತವಾಗಿ ಹಕ್ಕುಪತ್ರಗಳನ್ನು ಹಂಚಿದವರು ಯಾರೇ ಆಗಲೀ, ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುತ್ತೇನೆ. ಇದರ ಬಗ್ಗೆ ಶಾಸನ ಸಭೆಯಲ್ಲಿ ಪ್ರಶ್ನಿಸಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುತ್ತೇನೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *