ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳ ಬೇಸರ ವ್ಯಕ್ತಪಡಿಸಿದರು.
ಲೋಕಸಭೆ ಚುನಾವಣೆಯ ಮತದಾನ ಮುಗಿದ ಮರುದಿನ ಶನಿವಾರ ಚಾಲುಕ್ಯ ಹೋಟೆಲ್‍ನಲ್ಲಿ ಚಹ ಸೇವಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಚಿತ್ರದುರ್ಗ ಜಿಲ್ಲೆಯ ಆರು ವಿಧಾನಸಭೆ ಹಾಗೂ ಶಿರಾ ಪಾವಗಡ ಸೇರಿದಂತೆ ಮೂರು ಸಾವಿರದ ಹಳ್ಳಿಗಳಿಗೆ ಸುತ್ತಾಡಿ ಮತಯಾಚಿಸಲು ಸಮಯ ಸಾಕಾಗಲಿಲ್ಲ. ಎಷ್ಟು ಸಾಧ್ಯವೋ ಅಷ್ಟು ಕಡೆ ಮತದಾರರನ್ನು ಭೇಟಿ ಮಾಡಿ ಮತ ಕೇಳಿದ್ದೇನೆ. ಗೆಲ್ಲಿಸಿ ಪಾರ್ಲಿಮೆಂಟ್‍ಗೆ ಕಳಿಸಿಕೊಟ್ಟರೆ ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿರುವ ಜನ ದೇಶ ಸುಭದ್ರವಾಗಿರಬೇಕಾದರೆ ಯಾರ ಕೈಗೆ ಅಧಿಕಾರ ಕೊಡಬೇಕು. ಯಾರು ಈ ದೇಶದ ಪ್ರಧಾನಿಯಾಗಬೇಕೆಂಬ ಜಾಗೃತಿ ಕ್ಷೇತ್ರದ ಮತದಾರರಲ್ಲಿ ಮೂಡಿರುವುದು ಅತ್ಯಂತ ಸಂತೋಷದ ಸಂಗತಿ. ಈ ನಿಟ್ಟಿನಲ್ಲಿ ಜನ ಯೋಚಿಸಿ ಮತದಾನ ಮಾಡಿದ್ದಾರೆಂಬ ನಂಬಿಕೆಯಿದೆ. ಚುನಾವಣೆಯಲ್ಲಿ ಮಾತ್ರ ಪಕ್ಷದಿಂದ ಸ್ಪರ್ಧಿಸಿ ರಾಜಕೀಯ ಮಾಡುವುದು ಅನಿವಾರ್ಯ ಮತದಾನ ಮುಗಿದ ನಂತರ ನಾನು ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರ ಜನಪ್ರತಿನಿಧಿ. ಯಾವುದೇ ತಾರತಮ್ಯವಿಲ್ಲದೆ ನಿಸ್ಪಕ್ಷಪಾತವಾಗಿ ಎಲ್ಲರ ಸೇವೆ ಮಾಡಲು ಸಿದ್ದ ಎಂದು ತಿಳಿಸಿದರು.
ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











