Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಡವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ನೇರ್ಲಗುಂಟೆ ರಾಮಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಬಡತನದ ಬೇಗೆಯಲ್ಲಿ ಬೇಯುತ್ತಿರುವವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆಂದು ಕರ್ನಾಟಕ ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ನೇರ್ಲಗುಂಟೆ ರಾಮಪ್ಪ ಭರವಸೆ ನೀಡಿದರು.

ಭೋವಿ ಅಭಿವೃದ್ದಿ ನಿಮಗದ ಅಧ್ಯಕ್ಷರಾಗಿ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಶನಿವಾರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ನಾನು ಬಯಸಿದ್ದೆ ಬೇರೆ, ಸಿಕ್ಕಿದ್ದೆ ಬೇರೆ. ನಾನು ಬೇರೆ ಜಾತಿಯಲ್ಲಿ ಹುಟ್ಟಿದ್ದರೆ ಇಷ್ಟೊತ್ತಿಗೆ ಎರಡು ಮೂರು ಸಾರಿ ಶಾಸಕನಾಗಿರುತ್ತಿದ್ದೆ. ಜಿಲ್ಲೆಯ ಶಾಸಕರು ಹಾಗು ಜಿಲ್ಲಾ ಉಸ್ತುವಾರಿ ಸಚಿವರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ನನ್ನ ಬಗ್ಗೆ ಚರ್ಚಿಸಿದ್ದರ ಫಲವಾಗಿ ನನಗೆ ಕರ್ನಾಟಕ ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನ ಸಿಕ್ಕಿದೆ. ಅನೇಕ ವರ್ಷಗಳಿಂದಲೂ ಪಕ್ಷಕ್ಕೆ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆ. ರಾಣೆಬೆನ್ನೂರು, ಹೆಚ್.ಡಿ.ಕೋಟೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನನ್ನನ್ನು ಉಸ್ತುವಾರಿಯಾಗಿ ನೇಮಕ ಮಾಡಿದಾದ ಇಬ್ಬರು ಅಭ್ಯರ್ಥಿಗಳ ಗೆಲುವಿಗೆ ಶಕ್ತಿ ಮೀರಿ ಶ್ರಮಿಸಿದೆ. ಸ್ವಂತ ಹಣ ಖರ್ಚು ಮಾಡಿಕೊಂಡು ಪಕ್ಷದ ಕೆಲಸ ಮಾಡುತ್ತಿದ್ದೇನೆಂದರು.
ಭೋವಿ ಅಭಿವೃದ್ದಿ ನಿಗಮದಲ್ಲಿ ಅನೇಕ ಸಮಸ್ಯೆ, ಸವಾಲುಗಳಿವೆ. ಎಲ್ಲವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ದಲ್ಲಾಲಿಗಳನ್ನು ದೂರವಿಟ್ಟು, ನಿಜವಾದ ಬಡವರು, ಶೋಷಿತರಿಗೆ ಸರ್ಕಾರದ ಯೋಜನೆಗಳನ್ನು ಮುಟ್ಟಿಸುತ್ತೇನೆ. ಅದಕ್ಕಾಗಿ ಧೈರ್ಯ, ಶಕ್ತಿ, ಸಾಮಥ್ರ್ಯವಿದೆ. ಎಲ್ಲರ ಸಲಹೆ, ಸಹಕಾರ ಪಡೆದು ನನ್ನ ಇತಿಮಿತಿಯೊಳಗೆ ಕೆಲಸ ಮಾಡುತ್ತೇನೆಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ ಕಾಂಗ್ರೆಸ್ ಪಕ್ಷ ಬಡವರು, ಶೋಷಿತರು, ರೈತರು, ಎಲ್ಲಾ ವರ್ಗದವರ ಪರವಾಗಿದೆ. ಸಾಮಾಜಿಕ ನ್ಯಾಯ ನೀಡುವಲ್ಲಿ ಮೊದಲಿನಿಂದಲೂ ಮುಂಚೂಣಿಯಲ್ಲಿದೆ. ರಾಮಪ್ಪ ನೇರ್ಲಗುಂಟೆರವರು ನಿರಂತರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವುದರಿಂದ ನಾಯಕರುಗಳು ಗುರುತಿಸಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಸರ್ಕಾರದಿಂದ ಸಿಗುವ ಯೋಜನೆಗಳನ್ನು ಭೋವಿ ಸಮಾಜದಲ್ಲಿನ ಕಟ್ಟಕಡೆಯವರಿಗೆ ತಲುಪಿಸಲಿ. ಕಾರ್ಯಕರ್ತರು, ಮುಖಂಡರುಗಳಿಗೂ ಯೋಜನೆಯ ಅರಿವು ಮೂಡಿಸಲಿ ಎಂದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ ಮಾತನಾಡುತ್ತ ಚಳ್ಳಕೆರೆ ಎಂಎಲ್‍ಎ. ಟಿ.ರಘುಮೂರ್ತಿ ಮೂರನೆ ಬಾರಿ ಗೆಲ್ಲಲು ನೇರ್ಲಗುಂಟೆ ರಾಮಪ್ಪನವರ ಪರಿಶ್ರಮವಿದೆ. ಶೋಷಿತ ಸಮುದಾಯಗಳಿಗೆ ನ್ಯಾಯ ನೀಡಬೇಕಾಗಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನು ದೊಡ್ಡ ಅಧಿಕಾರ ಸಿಗಲಿ ಎಂದು ಹಾರೈಸಿದರು.
ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಜಿ.ವಿ.ಮಧುಗೌಡ, ಮುದಸಿರ್ ನವಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್, ಮಹಡಿ ಶಿವಮೂರ್ತಿ, ನೇತ್ರಾವತಿ, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಹೆಚ್.ಅಂಜಿನಪ್ಪ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಲಕ್ಷ್ಮಿಕಾಂತ್, ಲೋಕೇಶ್‍ನಾಯ್ಕ, ನ್ಯಾಯವಾದಿ ಸುದರ್ಶನ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ನಂದಿನಿಗೌಡ, ಸೈಯದ್ ಅಲ್ಲಾಭಕ್ಷಿ, ಖುದ್ದೂಸ್, ದಲಿತ ಮುಖಂಡ ರಾಜಪ್ಪ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now