ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರ ಅಂತಿಮ ಸಂಸ್ಕಾರವನ್ನು ಮೋದಿ ಮತ್ತು ಸಹೋದರರು ಮಾಡಿದ್ದಾರೆ. ಮೋದಿ ಅವರ ತಾಯಿ ನಿಧನಕ್ಕೆ ದೇಶದ ಗಣ್ಯರು ಕಂಬನಿ ಮಿಡಿದಿದ್ದಾರೆ, ಪ್ರಧಾನಿ ಮೋದಿಗೆ ಸಾಂತ್ವಾನ ಹೇಳಿದ್ದಾರೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕೂಡ ಸಾಂತ್ವಾನ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ದೇವೇಗೌಡ ಅವರು, ತಾಯಿಯನ್ನು ಕಳೆದುಕೊಂಡು ನೋವಿನಲ್ಲಿರುವ ಪ್ರಧಾನಿ ಮೋದಿಗೆ ಈ ಸಂದರ್ಭದಲ್ಲಿ ನಾನು ಧೈರ್ಯ ತುಂಬಲು ಬಯಸುತ್ತೇನೆ. ಮೋದಿ ಅವರ ತಾಯಿ ಹೀರಾಬೆನ್ ಅವರು ಪರಿಪೂರ್ಣ ಜೀವನವನ್ನು ನಡೆಸಿ ಶತಾಯುಶಿ ಆಗಿದ್ದರು. ಪ್ರಧಾನಿಗಳ ಕುಟುಂಬಕ್ಕೆ ಈ ನಷ್ಟ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಇನ್ನು ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…