ಸುದ್ದಿಒನ್ : ಐಸಿಸಿ ಏಕದಿನ ರ‌್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಸಾಮರ್ಥ್ಯ ತೋರಿದ್ದಾರೆ. ಐಸಿಸಿ ಪ್ರಕಟಿಸಿರುವ ಇತ್ತೀಚಿನ ಬ್ಯಾಟ್ಸ್‌ಮನ್‌ಗಳ ರ‌್ಯಾಂಕಿಂಗ್‌ನಲ್ಲಿ ರೋಹಿತ್ ಶರ್ಮಾ ಆರನೇ ಸ್ಥಾನಕ್ಕೆ ತಲುಪಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್-2023ರಲ್ಲಿ ಆಡುತ್ತಿರುವ ರೋಹಿತ್ ಐದು ಸ್ಥಾನ ಮೇಲೇರಿ ಆರನೇ ಸ್ಥಾನಕ್ಕೆ ಏರಿದ್ದಾರೆ. ಅಫ್ಘಾನಿಸ್ತಾನ ವಿರುದ್ಧ ಶತಕ ಸಿಡಿಸಿದ ಹಿಟ್‌ಮ್ಯಾನ್ ಪಾಕಿಸ್ತಾನ ವಿರುದ್ಧವೂ 86 ರನ್‌ಗಳೊಂದಿಗೆ ಉತ್ತಮ ಆಟ ಪ್ರದರ್ಶಿಸಿದ್ದರು.
ಈ ಮೂಲಕ ರೋಹಿತ್ ತಮ್ಮ ಶ್ರೇಯಾಂಕವನ್ನು ಆರನೆಯ ಸ್ಥಾನಕ್ಕೆ ಏರಿಸಿಕೊಂಡಿದ್ದಾರೆ. ರೋಹಿತ್ ಐಸಿಸಿ ಏಕದಿನ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಯನ್ನು ಮೊದಲ ಬಾರಿಗೆ ಹಿಂದಿಕ್ಕಿದ್ದಾರೆ. ಸದ್ಯ ಕೊಹ್ಲಿ 9ನೇ ಸ್ಥಾನದಲ್ಲಿದ್ದಾರೆ.
ಪಾಕಿಸ್ತಾನದ ನಾಯಕ ಬಾಬರ್ ಅಜಮ್ ನಂ.1 ಸ್ಥಾನದಲ್ಲಿದ್ದರೆ, ಭಾರತದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಎರಡನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ ಈ ಮೆಗಾ ಟೂರ್ನಿಯಲ್ಲಿ ಸತತ ಎರಡು ಶತಕ ಸಿಡಿಸಿದ ದಕ್ಷಿಣ ಆಫ್ರಿಕಾದ ಸ್ಟಾರ್ ಓಪನರ್ ಕ್ವಿಂಟನ್ ಡಿ ಕಾಕ್ ಏಕದಿನ ರ್ಯಾಂಕಿಂಗ್ ನಲ್ಲಿ 3ನೇ ಸ್ಥಾನಕ್ಕೆ ತಲುಪಿದ್ದಾರೆ.