ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 30 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿಯ ಜ್ಞಾನ ಪೂರ್ಣ ಶಾಲೆಗೆ ಪ್ರಥಮ ವರ್ಷದ ಪ್ರಯತ್ನದಲ್ಲಿಯೇ ಶೇ. 100 ರಷ್ಟು ಫಲಿತಾಂಶ ಪಡೆಯುವ ಮೂಲಕ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿದ್ದಾರೆ.
2025-26 ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 9 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಮತ್ತು13 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಯೋಗೇಶ್ ದತ್ತ ಅವರು 92.2 % ಭವ್ಯ ಸಿ ಅವರು 91.2 % ಸ್ವರೂಪ್ ವಿ. 89 % ಅಂಕಗಳನ್ನು ಪಡೆದಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ವೆಂಕಟೇಶ್ ರೆಡ್ಡಿಯವರು ಮತ್ತು ಕಾರ್ಯದರ್ಶಿಗಳಾದ ಶ್ರೀಮತಿ ಸುಹಾಸಿನಿ ವೆಂಕಟೇಶ್ ರೆಡ್ಡಿಯವರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಬೋಧಕೇತರ ವರ್ಗದವರು ಅಭಿನಂದಿಸಿರುತ್ತಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











