ಪಕ್ಷ ನಿಷ್ಠಾವಂತರನ್ನು ಗುರುತಿಸಿ ಅಧಿಕಾರ ನೀಡುತ್ತದೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

suddionenews
1 Min Read

ಚಿತ್ರದುರ್ಗ, (ಮೇ03): ಕಳೆದ ಮೂರು ವರ್ಷಗಳಿಂದಲೂ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು ಅಂತರ ಕಾಯ್ದುಕೊಂಡಿದ್ದ ಬಿಜೆಪಿ.ನಗರ ಮಂಡಲ ಮಾಜಿ ಅಧ್ಯಕ್ಷ ಪಿ.ಲೀಲಾಧರ್ ಠಾಕೂರ್ ಅವರ ನಿವಾಸಕ್ಕೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸೋಮವಾರ ಭೇಟಿ ನೀಡಿ ಅನೌಪಚಾರಿಕವಾಗಿ ಚರ್ಚಿಸಿದರು.

ಪಕ್ಷದಲ್ಲಿ ಯಾವುದೇ ಅಧಿಕಾರ ಸಿಗದಿದ್ದರೂ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಪಿ.ಲೀಲಾಧರ್ ಠಾಕೂರ್ ಕೇಂದ್ರ ಸಚಿವರ ಗಮನ ಸೆಳೆದು ನನಗೂ ಅನ್ಯಾಯವಾಗಿದೆ ಎಂದು ತಮ್ಮ ಅಸಮಾಧಾನವನ್ನು ತೋಡಿಕೊಂಡರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ.ಸರ್ಕಾರ ಅಧಿಕಾರದಲ್ಲಿರುವುದರಿಂದ ನಿಷ್ಟಾವಂತ ಕಾರ್ಯಕರ್ತರಿಗೆ ಯಾವುದೇ ರೀತಿಯಲ್ಲಿ ಪಕ್ಷದಿಂದ ವಂಚನೆಯಾಗುವುದಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಿ 2023 ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ರಾಜ್ಯದಲ್ಲಿ ಬಿಜೆಪಿ.ಯನ್ನು ಅಧಿಕಾರಕ್ಕೆ ತರುವಂತೆ ಪಿ.ಲೀಲಾಧರ್ ಠಾಕೂರ್ ಗೆ ಸೂಚಿಸಿದರು.

ಪಕ್ಷದ ಬಗ್ಗೆ ಬೇಸತ್ತು ಯಾರ್ಯಾರು ದೂರ ಉಳಿದಿದ್ದೀರ ಅವರುಗಳೆಲ್ಲಾ ಮತ್ತೆ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂಘಟನೆಯಲ್ಲಿ ತೊಡಗಿಕೊಳ್ಳಿ. ಒಂದಲ್ಲ ಒಂದು ದಿನ ಪಕ್ಷ ನಿಷ್ಠಾವಂತರನ್ನು ಗುರುತಿಸಿ ಅಧಿಕಾರ ನೀಡುತ್ತದೆ ಎಂಬ ಭರವಸೆಯಿತ್ತರು. ಶ್ರೀಮತಿ ವಿದ್ಯಾಠಾಕೂರ್ ಈ ಸಂದರ್ಭದಲ್ಲಿದ್ದರು.

Share This Article
Leave a Comment

Leave a Reply

Your email address will not be published. Required fields are marked *