Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಇದ್ರೆ ನೆಮ್ದಿಯಾಗಿ ಇರ್ಬೇಕು ಸಾಂಗ್ ರಿಲೀಸ್ : ದರ್ಶನ್ ನೋಡಿ ಫ್ಯಾನ್ಸ್ ಏನಂದ್ರು..?

---Advertisement---

ಇಂದು ನಟ ದರ್ಶನ್ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಯಾಕಂದ್ರೆ ಡೆವಿಲ್ ಸಿನಿಮಾದ ಇದ್ದರೆ ನೆಮ್ದಿಯಾಗಿರ್ಬೇಕು ಹಾಡು ರಿಲೀಸ್ ಆಗಿದೆ. ಬೆಳಗ್ಗೆ ರಿಲೀಸ್ ಆದ ಹಾಡು ನೋಡ ನೋಡುತ್ತಲೇ ಮಿಲಿಯನ್ ಗಟ್ಟಲೇ ವೀವ್ಸ್ ಆಗಿದೆ. ನಿನ್ನೆಯಿಂದಾನೂ ತುದಿಗಾಲಿನಲ್ಲಿ ನಿಂತು ಈ ಹಾಡಿಗೋಸ್ಕರ ಕಾಯ್ತಾ ಇದ್ರು ಅಭಿಮಾನಿಗಳು.

ದರ್ಶನ್ ಈ ಹಾಡಲ್ಲಿ ಸ್ಟೈಲೀಶ್ ಆಗಿ,‌ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಯೂಟ್ಯೂಬ್ ಚಾನೆಲ್ ನಲ್ಲಿ ಹಾಡು ರಿಲೀಸ್ ಆಗಿದೆ. ಅನಿರುದ್ಧ್ ಶಾಸ್ತ್ರಿ ಸಾಹಿತ್ಯ ಬರೆದಿದ್ದು, ದೀಪಕ್ ಬಾಲು ಹಾಡಿದ್ದಾರೆ. ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಸಂತೂ ಕೊರಿಯೋಗ್ರಫಿ ಅದ್ಭುತವಾಗಿದೆ. ಮಿಲನಾ ಪ್ರಕಾಶ್ ಅವರ ನಿರ್ದೇಶನದಲ್ಲಿ ಬಂದಿರುವ ಡೆವಿಲ್ ಅಕ್ಟೋಬರ್ ನಲ್ಲಿ ತೆರೆಗೆ ಬರುವುದಕ್ಕೆ ಸಿದ್ಧವಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಈ ಸಿನಿಮಾ ಹಾಡು ಬಿಡುಗಡೆಯ ಸಂದರ್ಭದಲ್ಲಿ ಅಭಿಮಾನಿಗಳ ಜೊತೆಗೆ ಅವರಿರುವುದಕ್ಕೆ ಆಗಿಲ್ಲ. ಈ ಹಾಡು ಆಗಸ್ಟ್ 15ರಂದೇ ರಿಲೀಸ್ ಆಗಬೇಕಿತ್ತು. ಆದರೆ ದರ್ಶನ್ ಅವರು ಹಿಂದಿನ ದಿನವೇ ಜೈಲು ಸೇರಿದ ಪರಿಣಾಮ ಅದು ಸಾಧ್ಯವಾಗಲಿಲ್ಲ. ಇದೀಗ ಸಿನಿಮಾದ ಜೊತೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಿಂತಿದ್ದಾರೆ. ಅವರ ಜೊತೆಗೆ ದರ್ಶನ್ ಅವರ ತಮ್ಮ ದಿನಕರ್ ತುಗೂದೀಪ, ಧನ್ವಿರ್ ಹಾಗೇ ರಚಿತಾ ರಾಮ್ ಕೂಡ ತಾನೂ ಸಿನಿಮಾದ ಪ್ರಚಾರ ಮಾಡ್ತೀನಿ ಎಂಬ ಭರವಸೆಯನ್ನ ನೀಡಿದ್ದಾರೆ. ಸದ್ಯ ಡೆವಿಲ್ ಸಿನಿಮಾ ಕಂಪ್ಲೀಟ್ ಆಗಿದ್ದು, ದರ್ಶನ್ ಅವರು ಜೈಲಿನಲ್ಲಿಯೇ ಇದ್ದರು ಕೂಡ ಸಿನಿಮಾ ರಿಲೀಸ್ ಆಗಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...