Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಕಾಂಗ್ರೆಸ್ ವಿರುದ್ಧ ಅಭಿಯಾನ : ಮೀಸಲಾತಿ ಜಾಗೃತಿ ಸಮಿತಿ ಎಚ್ಚರಿಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ನ. 27 : ಈ ಬಾರಿಯ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಒಳ ಮೀಸಲಾತಿ ಮಸೂದೆಯನ್ನು ಮಂಡಿಸಿ ಚರ್ಚೆ ಮಾಡಿ ಅದರ ಬಗ್ಗೆ ಸೂಕ್ತವಾದ ಕ್ರಮ ಜರುಗಿಸಬೇಕು, ಒಳಮೀಸಲಾತಿಯ ಕುರಿತು ಸಕಾರಾತ್ಮಕವಾದಂತ ತೀರ್ಮಾನ ತೆಗೆದುಕೊಳ್ಳದಿದ್ದರೆ ಅಧಿವೇಶನ ಮುಗಿದ ನಂತರ ಇಡೀ ಕರ್ನಾಟಕ ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧವಾಗಿ ಅಭಿಯಾನವನ್ನು ಶುರು ಮಾಡಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವನ್ನು ಕಳಿಸಲಾಗುವುದು ಎಂದು ಸರ್ಕಾರಕ್ಕೆ ಮೀಸಲಾತಿ ಜಾಗೃತಿ ಸಮಿತಿ ಎಚ್ಚರಿಕೆಯನ್ನು ನೀಡಿದೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಹೈಕೋರ್ಟ್ ನ್ಯಾಯವಾದಿಗಳು, ಬಿಎಸ್.ಪಿ.ಯ ರಾಜ್ಯಾಧ್ಯಕ್ಷರಾದ ಎ.ಹರಿರಾಮ್ ಕಳೆದ ಮೂರು ದಶಕಗಳಿಂದ ಕರ್ನಾಟಕ ರಾಜ್ಯದಲ್ಲಿ ಒಳ ಮೀಸಲಾತಿಯ ಕುರಿತು ದೊಡ್ಡ ಚಳುವಳಿ ಮತ್ತು ಹೋರಾಟಗಳು ನಡೆದಿದೆ.  ಈ ಹೋರಾಟದ ಪ್ರತಿಫಲವಾಗಿ ಕರ್ನಾಟಕ ರಾಜ್ಯದಲ್ಲಿ 2005ರಲ್ಲಿ ಸರ್ಕಾರವು ಸದಾಶಿವ ಆಯೋಗವನ್ನು ರಚಿಸಿತು. ಆಯೋಗವು ಇಡೀ ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಸಂಚರಿಸಿ, ರಾಜ್ಯದ ವಿವಿದ ಸಂಘಟನೆಗಳ ನಾಯಕರೊಂದಿಗೆ ಚರ್ಚಿಸಿ, ಮನೆ ಮನೆಗೂ ಬೇಟಿ ನೀಡಿ, ಮಾಹಿತಿಗಳನ್ನು ಸಂಗ್ರಹಿಸಿ, 101 ಜಾತಿಗಳನ್ನು ಅಧ್ಯಯನ ಮಾಡಿ ಅವರ ಸಾಮಾಜಿಕ ಶೈಕ್ಷಣಿಕ ಅರ್ಥಿಕ ಮತ್ತು ರಾಜಕೀಯ ಸ್ಥಾನಮಾನಗಳನ್ನು ವರದಿಯಲ್ಲಿ ಅಳವಡಿಸಿ, ಕೂಲಂಕುಶ ಅಧ್ಯಯನದ ನಂತರ ರಾಜ್ಯ ಸರ್ಕಾರಕ್ಕೆ ತನ್ನ ವರದಿಯನ್ನು ಒಪ್ಪಿಸಿದೆ.

ಆದರೆ ತದನಂತರ ಆ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸುವುದಾಗಲಿ ಚರ್ಚಿಸುವುದಾಗಲಿ ಅಥವಾ ಅದನ್ನು ಜಾರಿ ಮಾಡುವ ಬಗ್ಗೆ ಆಗಲಿ ಯಾವುದೇ ಸರ್ಕಾರ ತೀರ್ಮಾನಗಳನ್ನು ತೆಗೆದುಕೊಳ್ಳಲಿಲ್ಲ. ಇದರಿಂದ ಮತ್ತೆ ರಾಜ್ಯಾದ್ಯಂತ ಒಳಮಿಸಲಾತಿಯ ಪರ ಹೋರಾಟಗಳು ತೀವ್ರಗೊಳ್ಳುತ್ತಿದ್ದಂತೆ, ತಮ್ಮ ನಾಲ್ಕು ವರ್ಷಗಳ ಅಧಿಕಾರದ ಅವಧಿಯಲ್ಲಿ ಸುಮ್ಮನಿದ್ದ ಬಿಜೆಪಿ ಸರ್ಕಾರವು ದಲಿತರ ಕಣ್ಣೂರೆಸಲು ಚುನಾವಣೆಯ ಸಂದರ್ಭದಲ್ಲಿ ನಾವು ಕೇಂದ್ರ ಸರ್ಕಾರಕ್ಕೆ ಒಳಮಿಸಲಾತಿಯ ವರದಿಯನ್ನು ಶಿಫಾರಸ್ಸು ಮಾಡುತ್ತಿದ್ದೇವೆ ಎಂದು ಸುಳ್ಳು ಹೇಳಿ ಇನ್ನೇನು ಒಳಮಿಸಲಾತಿ ಜಾರಿಯಾಗಿಯೇ ಬಿಟ್ಟಿತು ಅನ್ನುವಂತ ಗುಮಾನಿಯನ್ನ ಸೃಷ್ಟಿಸಿ ಇಡೀ ದಲಿತ ಸಮುದಾಯಕ್ಕೆ ಮೋಸ ಮಾಡಿತು ಎಂದು ಆರೋಪಿಸಿದರು.

ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಸಿಟಿ ಆರ್ ಭಾಸ್ಕರ್ ಪ್ರಸಾದ್ ಮಾತನಾಡಿ,  ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವೂ ತನ್ನ ಪ್ರಣಾಳಿಕೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಒಳಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂಬ ಭರವಸೆಯನ್ನು ನೀಡಿ ದಲಿತರ ಮತಗಳನ್ನು ಪಡೆಯುವ ಹುನ್ನಾರ ಮಾಡಿ ಅದರಲ್ಲಿ ಯಶಸ್ವಿಯೂ ಆಯಿತು, ಆದರೆ, ತದನಂತರ ಒಳಮಿಸಲಾತಿಯ ಬಗ್ಗೆ ಯಾವುದೇ ಮತಾಗಲಿ, ಅಥವಾ ತೀರ್ಮಾನವಾಗಲಿ ತೆಗೆದುಕೊಳ್ಳಲಿಲ್ಲ, ಎಲ್ಲಾ ರಾಜಕೀಯ ಪಕ್ಷಗಳು ಒಳ ಮೀಸಲಾತಿಯನ್ನು ವಿಷಯವನ್ನು ಕೇವಲ ಚುನಾವಣೆಯ ಸರಕನ್ನಾಗಿ ಬಳಸಿಕೊಂಡು ನಿರಂತರವಾಗಿ ದಲಿತರನ್ನು ಮೋಸ ಮಾಡುತ್ತಿವೆ ಎಂದರು.

ಈ ಬಾರಿಯ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಒಳ ಮೀಸಲಾತಿ ಮಸೂದೆಯನ್ನು ಮಂಡಿಸಿ, ಚರ್ಚೆ ಮಾಡಿ ಅದರ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕು ಒಳಮೀಸಲಾತಿಯ ಕುರಿತು ಸಕಾರಾತ್ಮಕವಾದಂತ ತೀರ್ಮಾನ ತೆಗೆದುಕೊಳ್ಳದಿದ್ದರೆ ಅಧಿವೇಶನ ಮುಗಿದ ನಂತರ ಇಡೀ ಕರ್ನಾಟಕ ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧವಾಗಿ ಅಭಿಯಾನವನ್ನು ಶುರು ಮಾಡಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾರವನ್ನು ಕಳಿಸಲಾಗುವುದು ಹಾಗಾಗಿ ಮುಖ್ಯಮಂತ್ರಿಗಳು ಅವರು ಕೊಟ್ಟ ಮಾತಿನಂತೆ ಒಳ ಮೀಸಲಾತಿಯ ಕುರಿತು ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.

ಗೋಷ್ಠಿಯಲ್ಲಿ ಶ್ರೀನಿವಾಸ್, ಸೇರಿದಂತೆ ಇತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment