Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಯಿಂದ ಕಾಂಗ್ರೆಸ್ ಗೆ ಇನ್ನು ನಾಯಕರು ಬರ್ತಾರೆ : ಹುಬ್ಬಳ್ಳಿಯಲ್ಲಿ ಶಾಕ್ ನೀಡಿದ ಸವದಿ..!

---Advertisement---

 

 

ಹುಬ್ಬಳ್ಳಿ: ರಾಜ್ಯದಲ್ಲಿ ಸದ್ಯಕ್ಕೆ ಮೂರು ಕ್ಷೇತ್ರಗಳ ಉಪಚುನಾವಣೆಯ ಕಾವು ಜೋರಾಗಿದೆ. ಚನ್ನಪಟ್ಟಣದಲ್ಲಿ ಬಿಜೆಪಿ ನಾಯಕರಾಗಿದ್ದ ಸಿಪಿ ಯೋಗೀಶ್ವರ್ ಅವರು ಕಾಂಗ್ರೆಸ್ ಸೇರಿ, ಅಲ್ಲಿಂದಾನೇ ಸ್ಪರ್ಧೆಗೆ ಇಳಿದಿದ್ದಾರೆ. ಯೋಗೀಶ್ವರ್ ಕಾಂಗ್ರೆಸ್ ಬಂದಿದ್ದಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದರು. ಕಾಂಗ್ರೆಸ್ ನಲ್ಲಿ ಒಳ್ಳೆಯ ಸ್ಥಾನ ಸಿಗಲ್ಲ ಎಂದಿದ್ದರು. ಈಗಾಗಲೇ ಸವದಿ ಹೋಗಿದ್ದಾರೆ. ಅವರಿಗೆ ಯಾವ ಸ್ಥಾನ ಸಿಕ್ಕಿದೆ ನೋಡಿದ್ದೀರಲ್ಲ ಎಂದು ವ್ಯಂಗ್ಯವಾಡಿದ್ದರು. ಇದೀಗ ಅದೇ ಲಕ್ಷ್ಮಣ ಸವದಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಬಿಜೆಪಿಯಿಂದ ಕಾಂಗ್ರೆಸ್ ಗೆ ಬಹಳ ಜನ ಬರುತ್ತಾರೆಂದು ಹುಬ್ಬಳ್ಳಿಯಲ್ಲಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ನಶಿಸಿ ಹೋಗಲಿದೆ. ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದ ಸರ್ಕಾರ ಬೀಳುತ್ತದೆ ಎಂದು ಹೇಳುತ್ತಲೆ ಇದ್ದಾರೆ. ಆದರೆ ಇನ್ನೂ ಮೂರು ವರ್ಷ ಅದನ್ನೇ ಹೇಳುತ್ತಾ ಇರುತ್ತಾರೆ. ಮುಂದಿನ ಐದು ವರ್ಷವೂ ಮತ್ತೆ ಅದೇ ಡೈಲಾಗ್ ಅನ್ನು ಹೇಳುತ್ತಾ ಇರುತ್ತಾರೆ.

ಕಾಂಗ್ರೆಸ್ ಗೆ ಬಹಳ ಜನ ಬರುತ್ತಾರೆ. ಆದರೆ ಜಾಗ ಕಲ್ಪಿಸುವುದು ಬಹಳ ಕಷ್ಟವಾಗುತ್ತಿದ್ದು, ಯಾವ ಯಾವ ಕ್ಷೇತ್ರ ಎಂಬುದನ್ನು ನೋಡಿಕೊಂಡು ಬಿಜೆಪಿ ನಾಯಕರನ್ನು ಕರೆದುಕೊಳ್ಳಬೇಕಿದೆ. ಬಿಜೆಪಿಯೊಂದು ಆರು ಬಾಗಿಲಾಗಿದೆ. ಅದು ಮನೆಯೊಂದು ಮೂರು ಬಾಗಿಲಲ್ಲ. ಆರು ಬಾಗಿಲಾಗಿದೆ. ಬಿಜೆಪಿಯಲ್ಲೂ ಹೇಳುವವರು ಇಲ್ಲ. ಕೇಳುವವರು ಯಾರು ಇಲ್ಲ‌ ಎಂದು ವ್ಯಂಗ್ಯವಾಡಿದ್ದಾರೆ.

ಆದರೆ ಉಪಚುನಾವಣೆಯ ಹೊಸ್ತಿಲಲಲ್ಲಿ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ನಾಯಕರ ಕುರಿತು ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಯಾರಿರಬಹುದು ಎಂಬ ಪ್ರಶ್ನೆಗಳು ಎದ್ದಿವೆ. ಸದ್ಯ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಾಯಕರು ಉಪಚುನಾವಣೆಯ ಬ್ಯುಸಿಯಲ್ಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment