Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳು ಉತ್ತಮ ಚಿಂತನೆ ಬೆಳೆಸಿಕೊಂಡರೆ ಭವಿಷ್ಯ ಉಜ್ವಲ : ಎಂ.ಸಿ. ರಘುಚಂದನ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 10 : ಒಳ್ಳೆಯ ಆಲೋಚನೆ, ಉತ್ತಮ ಜೀವನ ನಿಮ್ಮ ಕೈಯಲ್ಲಿದ್ದರೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯವಾಗಲಿದೆ ಎಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

 

ಮಂಗಳವಾರ ಸಂಸ್ಥೆಯಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನ.2025 ರಲ್ಲಿ ನಡೆದ ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿಶ್ವವಿದ್ಯಾನಿಲಯ ಶ್ರೇಣಿಯಲ್ಲಿ ರ್ಯಾಂಕ್‍ಗಳನ್ನು ಪಡೆದ ಆದ್ಯಾ ಕಾಲೇಜ್ ಆಫ್ ಫಾರ್ಮಸಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

 

ಹೆಣ್ಣನ್ನು ಭಾರತಮಾತೆ ಎಂದು ಕರೆಯಲಾಗುವುದು. ನಮ್ಮ ದೇಶದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವಿದೆ. ಆದರೆ ದ್ರೌಪದಿ ಮುರ್ಮುರವರು ರಾಷ್ಟ್ರಪತಿಯಾಗಲು ಎಪ್ಪತ್ತು ವರ್ಷಗಳ ಕಾಲ ಬೇಕಾಯಿತು. ಕಲ್ಪನಾ ಚಾವ್ಲ, ದೆಹಲಿ ಮುಖ್ಯಮಂತ್ರಿ ಇವರುಗಳೆಲ್ಲಾ ಹೆಣ್ಣಲ್ಲವೇ. ಹೆಣ್ಣಿಲ್ಲದೆ ಯಾವ ಸೃಷ್ಠಿಯೂ ಇಲ್ಲ. ಎಲ್ಲೆಡೆ ಜಾತಿಯತೆ, ಧರ್ಮಾಂಧತೆ ತುಂಬಿ ತುಳುಕುತ್ತಿದೆ. ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಮಾನಸಿಕವಾಗಿ ಬಲಶಾಲಿಗಳಾಗಿ. ನಕಾರಾತ್ಮಕ ಚಿಂತನೆಯಿಂದ ಹೊರಬನ್ನಿ. ಒಬ್ಬರು ಮತ್ತೊಬ್ಬರನ್ನು ನೋಡಿ ಸುಧಾರಿಸಿಕೊಳ್ಳದಷ್ಟು ಅಸೂಯೆಯಿದೆ. ಒಂದಲ್ಲ ಒಂದು ರೀತಿಯ ಒತ್ತಡದಲ್ಲಿ ಸಿಲುಕಿದಾಗ ಹೆಣ್ಣು ಮಾನಸಿಕ ಮತ್ತು ದೈಹಿಕವಾಗಿ ನಿಶ್ಯಕ್ತಳಾಗುವುದು ಸಹಜ. ಸಿನಿಮಾ ಹೀರೋ, ಹೀರೋಯಿನ್‍ಗಳು ನಿಮಗೆ ಮಾಡಲ್ ಆಗಬಾರದು. ನಿಮ್ಮನ್ನು ಹೆತ್ತು ಹೊತ್ತು ಸಾಕಿ ಸಲಹಿದ ಅಪ್ಪ-ಅಮ್ಮ, ವಿದ್ಯೆ ಕಲಿಸಿದ ಗುರುಗಳನ್ನು ಮಾದರಿಯಾಗಿಟ್ಟುಕೊಂಡರೆ ಜೀವನದಲ್ಲಿ ಗುರಿ ಸಾಧಿಸುತ್ತೀರ ಎಂದರು.

 

ನಮ್ಮ ಸಂಸ್ಥೆಯ ಯಾವ ವಿಭಾಗದ ವಿದ್ಯಾರ್ಥಿಗಳಾಗಲಿ ವಿಶ್ವವಿದ್ಯಾನಿಲಯದ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಗಳಿಸಿ ಚಿನ್ನದ ಪದಕ ಪಡೆದರೆ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಿಂದ ಎರಡು ಲಕ್ಷ ರೂ.ಗಳನ್ನು ನೀಡಿ ಅಭಿನಂದಿಸಲಾಗುವುದೆಂದು ಭರವಸೆ ನೀಡಿದರು.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಡೀನ್ ಡಾ.ಬಿ.ಸಿ.ಅನಂತರಾಮು, ಆದ್ಯಾ ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಡಾ.ಮೊಹಮದ್ ಮುತಾಹರ್
ಆರ್.ಕೆ, ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಎ.ಜೆ.ಶಿವಕುಮಾರ್, ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಕೆ.ಪಿ.ನಾಗಭೂಷಣ್, ಎಸ್.ಎಲ್.ವಿ.ನರ್ಸಿಂಗ್ ಕಾಲೇಜು ಪ್ರಾಚಾರ್ಯರಾದ ಡಾ.ಎಂ.ಎಂ.ಮಹಾಂತೇಶ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಕೇಶವಮೂರ್ತಿ, ಮಾನವ ಸಂಪನ್ಮೂಲ ಮತ್ತು ಆಡಳಿತ ವ್ಯವಸ್ಥಾಪಕರಾದ ಡಾ.ಕೊಟ್ರೇಶ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಕೋಟ್ಲಾ ಸುನೀಲ್, ಬೋಧಕ ಮತ್ತು ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...