Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

KSRTC ಬಸ್ ಮೇಲಿನ ಜಾಹೀರಾತು ತೆಗೆದರೆ ಬೀಳುತ್ತೆ ಎಫ್ಐಆರ್..!

---Advertisement---

ಬೆಂಗಳೂರು: ಇತ್ತೀಚೆಗೆ ರಾಜ್ಯದ ನಾನಾ ಭಾಗಗಳಲ್ಲಿ ಕೆಎಸ್ಆರ್ಟಿಸಿ ಬಸ್ ಮೇಲೆ ಹಾಕಿದ್ದಂತ ತಂಬಾಕು ಜಾಹೀರಾತನ್ನು ಜನ ಹರಿದು ಬಿಸಾಡುತ್ತಿದ್ದರು. ಇದೀಗ ಆ ರೀತಿ ಇನ್ಮುಂದೆ ಹರಿದು ಬಿಸಾಡಿದರೆ ಅಂತವರ ವಿರುದ್ಧ ಎಫ್ಐಆರ್ ದಾಖಲಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಸಾರಿಗೆ ಬಸ್ ಗಳ ಹೊರ ಭಾಗದಲ್ಲಿ ಅಳವಡಿಸಿದ್ದ ತಂಬಾಕು ಉತ್ಪನ್ನಗಳ ಜಾಹೀರಾತು ನಿರ್ಬಂಧಿಸಿದ್ದ ಸರ್ಕಾರ ತೆರವಿಗೆ ಎರಡು ವಾರಗಳ ಗಡುವು ನೀಡಿತ್ತು. ಇದೀಗ ನಿಯಮಗಳನ್ವಯ ಜಾಹೀರಾತು ಅಳವಡಿಕೆಯು ಸಾರಿಗೇತರ ಆದಾಯ ಮೂಲವಾಗಿದೆ. ಬಸ್ಸುಗಳಲ್ಲಿನ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಳಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.

 

ಬಸ್ಸುಗಳಲ್ಲಿನ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಳಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಮೂಲಕ ಸರ್ಕಾರ ಉಲ್ಟಾ ಹೊಡೀತಾ ಎಂಬ ಅನುಮಾನವೂ ವ್ಯಕ್ತವಾಗಿದೆ. ಇತ್ತೀಚೆಗೆ ಬಸ್ ಗಳ ಮೇಲೆ ಅಳವಡಿಸಿದ್ದ ಸಿಗರೇಟ್, ಪಾನ್ ಮಸಲಾ ಹಾಗೂ ಇತರ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಸಾರ್ವಜನಿಕರು, ಕನ್ನಡ ಪರ ಸಂಘಟನೆಗಳು ತೆರವು ಮಾಡಿದ್ದವು. ಸಾಮಾಜಿಕ ಜಾಲತಾಣಗಳಲ್ಲಿ ಒಂದು ರೀತಿಯ ಅಭಿಯಾನ ಆರಂಭವಾಗಿತ್ತು. ಅದರ ಬೆನ್ನಲ್ಲೇ ಎಚ್ಚೆತ್ತ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಬಸ್ ಗಳ ಮೇಲೆ ಜಾಹೀರಾತು ಅಳವಡಿಕೆ ನಿರ್ಬಂಧಿಸಿ ಆದೇಶಿಸಿದ್ದರು. ಆ ಜಾಹೀರಾತುಗಳ ತೆರವಿಗೆ ಫೆಬ್ರವರಿ 18ರವರೆಗೆ ಗಡುವು ನೀಡಲಾಗಿತ್ತು. ಇದು ಸಾರ್ವಜನಿಕರ ಆಕ್ರೋಶಕ್ಕೆ ಸಿಕ್ಕ ಜಯ ಎಂದು ಬಣ್ಣಿಸಲಾಗಿತ್ತು. ಆದರೆ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೀಡಿರುವ ಟಿಪ್ಪಣಿಯಲ್ಲಿ ಬಸ್ಸುಗಳಲ್ಲಿನ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಸಿದನ್ನು ಅಪರಾಧ ಎಂದಿದೆ. ಅವರ ಬಗ್ಗೆ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now