Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಖ್ಯಮಂತ್ರಿಗಳಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ಎರಡು ಲಕ್ಷದವರೆಗೆ ಸಾಲ ಮನ್ನಾ ಮಾಡಲಿ : ಮಾಜಿ ಸಚಿವರಾದ ಗೋವಿಂದ ಕಾರಜೋಳ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿಸೆಂಬರ್. 18:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಆರೇಳು ತಿಂಗಳಾಯಿತು ಒಂದೇ ಒಂದು ಅಭಿವೃದ್ಧಿ ಕಾಮಗಾರಿಗಳು ಸಹ ನಡೆದಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿನ ಕಾಮಗಾರಿಗಳನ್ನು ರದ್ದು ಪಡಿಸಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವರಾದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

ನಗರದಲ್ಲಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ಅಧಿಕಾರದ ಅವಧಿಯಲ್ಲಿ ಅನೇಕ ಗುತ್ತಿಗೆದಾರರು  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೇ ಒಂದು ಯೋಜನೆ, ಕಾಮಗಾರಿಗೆ ಚಾಲನೆ ನೀಡುವ ಕೆಲಸವನ್ನು ಮಾಡಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಅವರು,  ರಾಜ್ಯದಲ್ಲಿ ದೀನ ದಲಿತರಿಗೆ ರಕ್ಷಣೆ ಇಲ್ಲ.

ಬೆಳಗಾವಿ ಅಧಿವೇಶ ನಡೆದ ಸಂದರ್ಭದಲ್ಲಿ ಬೆಳಗಾವಿಯ ಪೃಥ್ವಿ ಸಿಂಗ್ ಎಂಬ ಯುವಕನಿಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚಂದ್ರಹಟ್ಟಿ ಹೊಳೆ ರವರು ಚಾಕು ಹಾಕಿಸಿದ್ದಾರೆ ಇದುವರೆಗೂ ಯಾರನ್ನು ಸಹ ಅರೆಸ್ಟ್ ಮಾಡಿಲ್ಲ. ಎಫ್ ಐ ಆರ್  ಸಹ ಆಗಿರುವುದಿಲ್ಲ.. ಮಂತ್ರಿಯವರ ಪ್ರಭಾವಕ್ಕೆ ಒಳಗಾಗಿ ಯಾವುದೇ ತರಹ ಕ್ರಮ ಕೈಗೊಂಡಿರುವುದಿಲ್ಲ ಎಂದು ಆರೋಪಿಸಿದರು.

ಬೆಳಗಾವಿ ಹತ್ತಿರದ ವಂಟೂರಿನಲ್ಲಿ ಮಹಿಳೆ ಮೇಲೆ ದೌರ್ಜನ್ಯ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಹೊಡೆದು ಹೇಯ ಕೃತ್ಯ ಮಾಡಿದ್ದಾರೆ ಇದುವರೆಗೂ ಯಾವುದೇ ಕ್ರಮ ಆಗಿಲ್ಲ. ವಸತಿ ಶಾಲೆಯಲ್ಲಿ ಮಲ ಗುಂಡಿಗಳನ್ನು ಸ್ವಚ್ಛತೆ ಮಾಡಲು ಮಕ್ಕಳನ್ನು ಬಳಸಿಕೊಂಡು ಕ್ಯಾವೆಂಜರ್ ರೀತಿಯಲ್ಲಿ ಮಕ್ಕಳ ಬಳಸಿಕೊಳ್ಳುತ್ತಿದ್ದಾರೆ. ಈ ಸರ್ಕಾರ ದಲಿತರ ಮೇಲೆ ದೌರ್ಜನ್ಯ ಎಸಗಿ ಅಮಾನವೀಯವಾಗಿ ವರ್ತನೆ ಮಾಡುತ್ತಿದೆ. ಘಟನಾ ಸ್ಥಳಗಳಿಗೆ ಯಾವುದೇ ಸರ್ಕಾರದ ಜನಪ್ರತಿನಿಧಿಗಳು ಭೇಟಿ ನೀಡಿಲ್ಲ. ಹೆಣ್ಣುಮಕ್ಕಳ ಸ್ನಾನಗೃಹಕ್ಕೆ ಹೋಗಿ ವಿಡಿಯೋ ಮಾಡಿದವರ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿ ಒಳಗಡೆ ಹಾಕಬೇಕೆಂದು ಆಗ್ರಹಿಸಿದರು.

ಬೆಳಗಾವಿ ಅಧಿವೇಶನ ಕಾಟಾಚಾರದ ಅಧಿವೇಶನ. ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರ ಅವಧಿಯಲ್ಲಿ ಉತ್ತರ ಕರ್ನಾಟಕದ ಜನರ ಕುಂದು ಕೊರತೆಗಳನ್ನು ಚರ್ಚೆ ಮಾಡಿ ಯೋಚನೆಗಳನ್ನು ರೂಪಿಸಲಿಕ್ಕೆ ವಿಧಾನಸೌಧವನ್ನು ನಿರ್ಮಾಣ ಮಾಡಲಾಯಿತು.ಆದರೆ ಅಧಿವೇಶದಲ್ಲಿ ಸಿದ್ದರಾಮಯ್ಯರವರು ಕಾಟಾಚಾರದ  08 ಘೋಷಣೆಗಳನ್ನು ಮಾಡಿದ್ದಾರೆ. ಈ ಸರ್ಕಾರ ಬಂದ ಮೇಲೆ ಉದ್ಯಮಗಳು ಬಂದಾಗಿವೆ. ರಾಜ್ಯದ ಜನತೆ ಉದ್ಯೋಗ ಹುಡುಕಿಕೊಂಡು ಗೋವಾ, ಮಹಾರಾಷ್ಟ್ರ ಬೆಂಗಳೂರು ಕಡೆಗೆ ಹೊರಟಿದ್ದಾರೆ. ಮುಖ್ಯಮಂತ್ರಿಗಳು ಅಸಲು ಕಟ್ಟಿದರೆ ಬಡ್ಡಿಯನ್ನು ಮನ್ನಾ ಮಾಡುತ್ತೇವೆ ಎಂದು ಹೇಳುತ್ತಾರೆ.. ಆದರೆ ಈ ಹಿಂದೆ ಯಡಿಯೂರಪ್ಪರವರು 03 ಲಕ್ಷದವರೆಗೆ 0% ಪರ್ಸೆಂಟ್ ಬಡ್ಡಿದರದಲ್ಲಿ ಸಾಲ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ರೈತರ ಬಗ್ಗೆ ಒಲವು ಇದ್ದರೆ ಎರಡು ಲಕ್ಷದವರೆಗೆ ಸಾಲ ಮನ್ನಾ ಮಾಡಿ ಎಂದು ಒತ್ತಾಯಿಸಿದರು.

11144 ಕೋಟಿ ಎಸ್.ಸಿ.ಪಿ.ಟಿ.ಎಸ್ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.. ಹಣವನ್ನು ಗ್ಯಾರೆಂಟಿಗೆ ಉಪಯೋಗ ಮಾಡಿಕೊಂಡಿದ್ದಾರೆ ಅದನ್ನು ವಾಪಸ್ ಕೊಡಬೇಕು..ಬರದಿಂದ ರಾಜ್ಯದಲ್ಲಿ ರೈತರು ಕಂಗಲಾಗಿದ್ದಾರೆ ರೈತರಿಗೆ ಎಕರೆಗೆ 25000 ಪರಿಹಾರ ನೀಡಬೇಕು ವರ್ಗಾವಣೆ ದಂದೆಯಲ್ಲಿ ತೊಡಗಿದ್ದಾರೆ.. ಸರ್ಕಾರಿ ನೌಕರರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ದೂರಿದರು.

ಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾಧುಕ್ಷ ಮುರುಳಿ, ವಕ್ತಾರರಾದ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್ ಮತ್ತಿತರರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!