Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಬದಲಾಯಿಸಿದರೆ ದಲಿತರಿಗೆ ನೀಡಬೇಕು : ಪರಮೇಶ್ವರ್ ಪರ ಬ್ಯಾಟ್

ಸಚಿವ ಪರಮೇಶ್ವರ್
---Advertisement---

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಖುರ್ಚಿ ಕದನ ಬಹಳ ಜೋರಾಗಿದೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಆಗ್ಬೇಕು ಅಂತ ಕಾಯ್ತಾ ಇದ್ರೆ, ಮತ್ತೊಂದು ಕಡೆ ದಲಿತ ಸಿಎಂ ವಿಚಾರ ಸದ್ದು ಮಾಡ್ತಾ ಇದೆ. ದಲಿತ ಸಮುದಾಯದ ನಾಯಕರು ಒಟ್ಟಾಗಿ ಈಗ ಪರಮೇಶ್ವರ್ ಪರ ಬ್ಯಾಟ್ ಬೀಸ್ತಾ ಇದ್ದಾರೆ. ಸಿಎಂ ಬದಲಾವಣೆ ಮಾಡುವುದಾದರೆ ಪರಮೇಶ್ವರ್ ಅವರಿಗೆ ನೀಡಬೇಕು ಒತ್ತಾಯ ಜೋರಾಗಿದೆ.

ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸಿಎಂ ಆಗುವ ಅವಕಾಶವಿತ್ತು. ಆದರೆ ಅದು ಆ ಸಮಯದಲ್ಲಿ ಕೈ ತಪ್ಪಿತ್ತು ಎಂಬ ನೋವನ್ನ ಖರ್ಗೆ ಅವರು ಹಂಚಿಕೊಂಡಿದ್ದರು. ಹೀಗಾಗಿಯೇ ಅವರು ರಾಜ್ಯ ರಾಜಕಾರಣಕ್ಕೆ ಬರಬಹುದು, ಸಿಎಂ ಆಗಬಹುದು ಎಂಬ ವಿಚಾರವೂ ಹರಿದಾಡಿತ್ತು. ಇದೀಗ ದಲಿತಪರ ನಾಯಕರು ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬಂದರೆ ಅವರನ್ನೇ ಸಿಎಂ ಮಾಡಿ, ಒಂದು ವೇಳೆ ಅವರು ಬಾರದೆ ಇದ್ದರೆ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಕೊಡಬೇಕು ಅಂತ ಹೇಳಿ ದಲಿತ ಸಚಿವರು, ಶಾಸಕರು, ನಾಯಕರು ಸಭೆಯನ್ನ ನಡೆಸಿದ್ದಾರೆ.

ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆಎನ್ ರಾಜಣ್ಣ ಸೇರಿದಂತೆ ಹಲವರು ಈ ಸಭೆಯಲ್ಲಿ ಸೇರಿದ್ದಾರೆ. ಈ ಸಭೆಯಲ್ಲಿ ಪರಮೇಶ್ವರ್ ಅವರ ಪರವಾಗಿಯೇ ಬ್ಯಾಟ್ ಬೀಸಿದ್ದಾರೆ. ಅತ್ತ ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡ್ತಾರೆ. ಆ ನಂತರ ತಮಗೆ ಪೂರಕವಾದಂತ ವಾತಾವರಣ ನಿರ್ಮಾಣ ಆಗಬಹುದು ಎಂಬ ನಿರೀಕ್ಷೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಇದ್ದಾರೆ ಎನ್ನಲಾಗ್ತಾ ಇದೆ. ಇತ್ತ ದಲಿತ ಸಿಎಂ ಕೂಗು ಕೇಳಿಸ್ತಾ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now