ಬೆಂಗಳೂರು: ಸಿಎಂ ಬದಲಾವಣೆಯ ಚರ್ಚೆ ಮತ್ತೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಪದತ್ಯಾಗಕ್ಕೆ ಸಿದ್ಧರಾಗಿದ್ದಾರೆ ಎಂದೇ ಹೇಳಲಾಗ್ತಿದೆ. ಈ ಬೆನ್ನಲ್ಲೇ ಮಾಜಿ ಸಚಿವ ಕೆ ಎನ್ ರಾಜಣ್ಣ ಮಾತನ್ನಾಡಿದ್ದು, ಸಿಎಂ ಬದಲಾವಣೆಯಾಗುವುದಾದರೆ ದಲಿತರೇ ಸಿಎಂ ಆಗಲಿ ಎಂದಿದ್ದಾರೆ. ಈ ದಲಿತ ಸಿಎಂ ಚರ್ಚೆ ಇಂದು ನಿನ್ನೆಯದ್ದಲ್ಲ. ಬಹಳಷ್ಟು ವರ್ಷಗಳಿಂದ ಈ ಚರ್ಚೆ ನಡೀತಾನೆ ಇದೆ.
ರಾಜಣ್ಣ ಅವರು ಹೇಳಿರುವ ಪ್ರಕಾರ, ಅಧಿಕಾರ ಮುಂದುವರೆಸಲು ಅಥವಾ ಪದತ್ಯಾಗ ಮಾಡಲು ಸಿದ್ದರಾಮಯ್ಯ ಅವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮ ಪ್ರಬಲ ಒತ್ತಾಯವಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಕ್ತ ಮನಸ್ಸಿನಲ್ಲಿದ್ದಾರೆ. ಹೈಕಮಾಂಡ್ ಮತ್ತು ರಾಹುಲ್ ಗಾಂಧಿ ಅವರು ನೀಡುವ ಯಾವುದೇ ಸೂಚನೆಯನ್ನು ಪಾಲಿಸುವುದಕ್ಕೂ ಅವರು ಸಿದ್ಧರಿದ್ದಾರೆ ಎಂದಿದ್ದಾರೆ.

ಅಧಿಕಾರ ಮುಂದುವರೆಸಲು ಅಥವಾ ಪದತ್ಯಾಗ ಮಾಡಲು ಅವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಪಕ್ಷದ ಹಿತಾದೃಷ್ಟಿಯಿಂದ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುವುದಾಗಿಯೂ ತಿಳಿಸಿದ್ದಾರೆ. ರಾಜ್ಯದಲ್ಲಿ ಮುಂದಿನ ಬಾರಿ ದಲಿತ ಸಮುದಾಯದ ನಾಯಕರು ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮ ಬೇಡಿಕೆ. ಈ ವಿಚಾರವನ್ನು ನಮ್ಮ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಇದರೊಂದಿಗೆ ಸಚಿವ ಸಂಪುಟ ಪುನರ್ ರಚನೆಯೂ ಆಗಬೇಕಿದೆಮ ಹೊಸಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಆಡಳಿತದಲ್ಲಿ ಹೊಸ ಬದಲಾವಣೆ ತರಬೇಕಿದೆ. 2013-18ರ ಅವಧಿಯ ಸಿದ್ದರಾಮಯ್ಯ ಅವರಿಗೂ ಈಗಿನ ಸಿದ್ದರಾಮಯ್ಯ ಅವರಿಗೂಬಹಳ ವ್ಯತ್ಯಾಸವಿದೆ. ಅಹಿಂದ ವರ್ಗದ ನಿರೀಕ್ಷೆಗಳು ಸರಿಯಾಗಿ ಈಡೇರುತ್ತಿಲ್ಲ ಎಂಬ ಅಸಮಾಧಾನ ಆ ವರ್ಗದಲ್ಲಿ ಮೂಡೊದೆ ಎಂಬ ಮಾತನ್ನ ಹೇಳಿದ್ದಾರೆ.



















