ದಾವಣಗೆರೆ: ರಾಜ್ಯದಲ್ಲಿ ಸಿಎಂ ಬದಲಾವಣೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಿ, ಬೆಸರೆಯವರು ಸಿಎಂ ಆಗುತ್ತಾರೆ ಎಂಬ ವಿಚಾರ ಚರ್ಚೆಗೆ ಬಂದಾಗಿನಿಂದ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲ ಬೆಳೆದಂತೆ ಬೆಳೆಯುತ್ತಲೆ ಇದೆ. ಸಿದ್ದರಾಮಯ್ಯ ಆದ್ಮೇಲೆ ಆ ಸ್ಥಾನವನ್ನು ಡಿಕೆ ಶಿವಕುಮಾರ್ ಅವರೇ ಅಲಂಕರಿಸಲಿದ್ದಾರೆ ಎಂಬುದು ಹೈಕಮಾಂಡ್ ನಿಂದಲೂ ಗೊತ್ತಿರುವ ಸತ್ತವಾಗಿದೆ. ಆದರೆ ಸಿಎಂ ನಾನು ಕೂಡ ಆಗಬಹುದು ಎಂಬ ಆಸೆಯನ್ನು ಈಗಾಗಲೇ ಹಲವರು ವ್ಯಕ್ತಪಡಿಸಿದ್ದಾರೆ. ಈಗ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂಬುದನ್ನು ಬಾಯ್ಬಿಟ್ಟು ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ನಾನು ಕೂಡ ಸಿಎಂ ರೇಸ್ ನಲ್ಲಿ ಇದ್ದೀನಿ. ಸಿಎಂ ಬದಲಾವಣೆಯ ಪ್ರಸಂಗ ಬಂದರೆ ನಾನು ಕೂಡ ಸ್ಪರ್ಧೆ ಮಾಡಲು ಸಿದ್ಧನಿದ್ದೇನೆ. ಇದರಲ್ಲಿ ಜೂನಿಯರ್, ಸೀನಿಯರ್ ಎನ್ನುವ ಪ್ರಶ್ನೆಯೇ ಬರುವುದಿಲ್ಲ. ಅಂತಹ ಪರಿಸ್ಥಿತಿ ಬಂದರೆ ಸಿಎಂ ಗದ್ದುಗೆಗೆ ಸ್ಪರ್ಧೆ ಮಾಡದೆ ಇರುವುದಿಲ್ಲ. ಅಲ್ಲದೇ ಹೈಕಮಾಂಡ್ ಆಶೀರ್ವಾದ ಇರುವ ತನಕ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿ. ಬಹುಮತ ಇರುವವರಿಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಒಂದು ವೇಳೆ ಸಿಎಂ ಬದಲಾವಣೆ ಆದರೆ ನಾನು ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.
ಮೂಡಾ ಹಗರಣದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ಕೋರ್ಟ್ ನಲ್ಲಿ ವಿಚಾರಣೆ ಕೂಡ ನಡೆಯುತ್ತಿದೆ. ನಾಳೆಗೆ ಅಂದ್ರೆ ಸೆಪ್ಟೆಂಬರ್ 12ಕ್ಕೆ ವಿಚಾರಣೆಯನ್ನು ಮುಂದೂಡೊದೆ. ಇದರ ನಡುವೆ ಸಿಎಂ ಆಗುವ ಆಸೆಯನ್ನು ಹಲವರು ವ್ಯಕ್ತಪಡಿಸುತ್ತಿದ್ದಾರೆ.