ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ಡಿನ್ನರ್ ಮೀಟಿಂಗ್ ವಿಚಾರ ಸಾಕಷ್ಟು ಚರ್ಚೆಗೆ ಗ್ತಾಸವಾಗಿದೆ. ಡಿನ್ನರ್ ಮೀಟಿಂಗ್ ಕ್ಯಾನ್ಸಲ್ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಶಾಸಕಾಂಗ ಸಭೆ ಕರೆದಿದ್ದಾರೆ. ಈ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಮಾಧ್ಯಮದವರಿಗೆ ಪ್ರತ್ಯುತ್ತರ ನೀಡಿದ್ದಾರೆ.
ನಮ್ಮಲ್ಲಿ ಯಾರಿಗೂ ಬಿಕ್ಕಟ್ಟು ಇಲ್ಲ. ಬಿಕ್ಕಟ್ಟು ಇದ್ದರೆ (ಮಾಧ್ಯಮ) ನಿಮ್ಮಲ್ಲಿಯೇ ಇರಬೇಕು. ನಮ್ಮಲ್ಲಿ ಬಿಕ್ಕಟ್ಟು ಇದೆ ಎಂದು ಹೇಳಿದವರು ಯಾರು..? ಕಾಂಗ್ರೆಸ್ ಕಚೇರಿಯಲ್ಲಿ ನಾನು, ಸರ್ಕಾರದ ವಿಚಾರದಲ್ಲಿ ಸಿಎಂ ಅವರ ಹೇಳಿಕೆಯೇ ಅಂತಿಮ. ಬೇರೆ ಬೇರೆ ಹೇಳಿಕೆಗಳಿಗೆ ಬೆಲೆ ಇಲ್ಲ. ಶಾಸಕಾಂಗ ಪಕ್ಷದ ಸಭೆ ಕರೆದಿರುವುದು ಗಾಂಧೀಜಿ ಅವರ ಮೌಲ್ಯಗಳನ್ನು ಉಳಿಸಲು, ಗಾಂಧು, ಅಂಬದೆಡ್ಕರ್ ಅವರ ಮೌಲ್ಯಗಳಯ, ಸಂವಿಧಾನ ರಕ್ಷಣೆ ಮಾಡಬೇಕಲ್ಲವೆ. ನಮ್ಮ ಪಕ್ಷದ ಆಚಾರ, ವಿಚಾರ, ಪ್ರಚಾರ ಮಾಡಬೇಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ಜಾರಿಯಾದ ಕಾರಣ ನಾವೂ ಸಚಿವರಾಗಿದ್ದೇವೆ.
ಮಾಧ್ಯಮಗಳಿಗೂ ಸ್ವಾತಂತ್ರ್ಯ ಸಿಕ್ಕಿದೆ. ಮುಂದಿನ ಪೀಳಿಗೆ ಯಾವ ದಿಕ್ಕಿನಲ್ಲಿ ಸಾಗಬೇಕಯ ಎಂದು ತಿಳಿಸಬೇಕಲ್ಲವೇ. ಹೀಗಾಗಿ ಸಭೆ ಮಾಡುತ್ತಿದ್ದೇವೆ ಎಂದಿದ್ದಾರೆ. ಇದೇ ವೇಳೆ 21ರ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಆಗಮಿಸುತ್ತಾರಾ ಎಂಬ ಪ್ರಶ್ನೆಗೆ, ಈ ಕಾರ್ಯಕ್ರಮಕ್ಕೆ ಯಾರೆಲ್ಲ ಆಗಮಿಸಬೇಕು ಎಂಬ ಪಟ್ಟಿ ದೆಹಲಿಯಿಂದಾನೇ ರವಾನೆಯಾಗಲಿದೆ. ಅದು ಬಂದ ಬಳಿಕ ನಿಮಗೆ ಮಾಹಿತಿ ನೀಡುತ್ತೇವೆ ಎಂದಿದ್ದಾರೆ.
ಸರ್ಕಾರದ ಹಣ ವ್ಯರ್ಥ ಮಾಡುತ್ತಿದ್ದಾರೆ ಎಂಬ ಬಿಜೆಪಿ ಹಾಗೂಜೆಡಿಎಸ್ ಆರೋಪಕ್ಕೆ, ಅವರು ಆರೋಪ ಮಾಡುತ್ತಿರಲಿ. ನಾವೂ ನಮ್ಮ ಸಿದ್ಧಾಂತ, ಆಚಾರ ವಿಚಾರವನ್ನು ಸರ್ಕಾರದ ಮುಖಾಂತರ ಹೇಳುತ್ತೇವೆ ಎಂದಿದ್ದಾರೆ.