Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಶದಲ್ಲಿ ಬದಲಾವಣೆಯಾಗಬೇಕಾದರೆ ಬುದ್ದ ಧಮ್ಮ ಆಚರಣೆಗೆ ಬರಬೇಕು : ಪ್ರೊ.ಸಿ.ಕೆ.ಮಹೇಶ್

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.14 : ಅಸಮಾನತೆ, ಜಾತೀಯತೆ, ಅಸ್ಪೃಶ್ಯತೆಗೆ ಬುದ್ದನ ಪಂಚಶೀಲಗಳಲ್ಲಿ ಉತ್ತರಗಳನ್ನು ಕಂಡುಕೊಳ್ಳಬಹುದು ಎಂದು ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಪ್ರೊ.ಸಿ.ಕೆ.ಮಹೇಶ್ ಹೇಳಿದರು.

ನವಯಾನ ಬುದ್ದ ಧಮ್ಮ ಸಂಘ ಚಿತ್ರದುರ್ಗ ವತಿಯಿಂದ ಪತ್ರಕರ್ತರ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ನವಯಾನ ಮುಂದಿನ ಹೆಜ್ಜೆಗಳ ನಿರ್ಧರಿಸುವ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಬುದ್ದ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಬುದ್ದನ ಆಲೋಚನೆಗೆ ಡಾ.ಬಿ.ಆರ್.ಅಂಬೇಡ್ಕರ್ ಬೇರೆ ಬೇರೆ ಮೆರಗನ್ನು ಕೊಟ್ಟಿದ್ದಾರೆ. ಬುದ್ದನ ನವಯಾನ ಬೇರೆ ನವಯಾನಕ್ಕಿಂತ ಭಿನ್ನವಾದುದು. ಕುಡಿತ, ಕಳ್ಳತನ, ಸುಳ್ಳು ಹೇಳುವುದು, ಹಿಂಸೆ, ಅಸಮಾನತೆ ಇವುಗಳ ವಿರುದ್ದ ಬುದ್ದ ಮಾತನಾಡಿದ್ದಾನೆ. ಅಸೃಶ್ಯತೆಯನ್ನು ಆಚರಿಸುವುದು, ಜಾತಿ ಅಸಮಾನತೆ, ವರ್ಗ ಅಸಮಾನತೆಯನ್ನು ವಿರೋಧಿಸುತ್ತಿದ್ದ ಬುದ್ದ ಯಜ್ಞ ಯಾಗಾದಿಗಳ ಹೆಸರಿನಲ್ಲಿ ವೈದ್ದಿಕ ಧರ್ಮದವರು ಪ್ರಾಣಿ ಹಿಂಸೆ ಮಾಡುತ್ತಿದ್ದುದನ್ನು ಬಲವಾಗಿ ಖಂಡಿಸುತ್ತಿದ್ದರು. ಅಹಿಂಸಾತ್ಮಕವಾದ ಜಗತ್ತನ್ನು ಬುದ್ದ ನೀಡಿದ್ದಾನೆ. ಮಾದಿಗ, ಒಲೆಯ ಜನಾಂಗದಲ್ಲಿ ಹುಟ್ಟಿರುವವರು ಬುದ್ದನ ಸಂದೇಶದಂತೆ ಅಹಿಂಸಾತ್ಮಕವಾಗಿದ್ದಾರೆಂದು ಹೆಮ್ಮೆಪಟ್ಟುಕೊಂಡರು.

ಶ್ರೇಷ್ಟಾತಿ ಶ್ರೇಷ್ಠ ವಿಚಾರಗಳನ್ನು ನವಯಾನ ಬುದ್ದ ಧಮ್ಮ ಕೊಟ್ಟಿದೆ. ದೇಶದಲ್ಲಿ ಬದಲಾವಣೆಯಾಗಬೇಕಾದರೆ ಬುದ್ದ ಧಮ್ಮ ಆಚರಣೆಗೆ ಬರಬೇಕು. ಮಾದಿಗ ಜಾತಿಯಲ್ಲಿ ಅಹಿಂಸಾತ್ಮಕ ಮಾನವೀಯ ಗುಣವಿದೆ. ಚಿಕ್ಕಮಗಳೂರಿನಲ್ಲಿ ದಲಿತ ಯುವಕ ದೇವಸ್ಥಾನ ಪ್ರವೇಶಿಸಿದ ಎನ್ನುವ ಕಾರಣಕ್ಕಾಗಿ ಥಳಿಸಲಾಗಿದೆ. ಅವಮಾನ, ತಿರಸ್ಕಾರ, ಜಾತಿಯತೆ, ಶೋಷಣೆ ಎಲ್ಲಿ ನಡೆಯುತ್ತದೋ ಅಂತಹ ಕಡೆ ಹೋಗಬೇಡಿ ಎಂದು ಅಂಬೇಡ್ಕರ್ ಹೇಳಿದ್ದಾರೆ. ಬುದ್ದ ಮಂದಿರವನ್ನು ಕಟ್ಟಿ ಹಿಂದೂ ಧರ್ಮದ ದೇವಾಲಯಗಳಿಗೆ ದೊಡ್ಡ ಸವಾಲಾಗಿ ನಿಂತು ಬ್ರಾಹ್ಮಣ್ಯವನ್ನು ಕಿತ್ತು ಹಾಕಬೇಕಿದೆ. ನಮಗಿರುವ ನೋವುಗಳಿಗೆ ಬುದ್ದನ ಪಂಚಶೀಲಗಳಲ್ಲಿ ಉತ್ತರಗಳನ್ನು ಕಂಡುಕೊಳ್ಳಬೇಕಿದೆ ಎಂದರು.

ನಿವೃತ್ತ ತಹಶೀಲ್ದಾರ್ ಮಲ್ಲಿಕಾರ್ಜುನ್ ಮಾತನಾಡಿ ನವಯಾನ ಬುದ್ದ ಧಮ್ಮ ಆಚರಣೆಯಲ್ಲಿದೆಯೇ ವಿನಃ ಅನುಸರಣೆಯಲ್ಲಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆ ಹಿನ್ನೆಲೆಯಲ್ಲಿ ನವಯಾನ ಬುದ್ದ ಧಮ್ಮ ಸಾಮಾಜಿಕರಣಗೊಳ್ಳಬೇಕಿದೆ ಎಂದು ಹೇಳಿದರು.

ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡುತ್ತ. ಎಲ್ಲಾ ಜಾತಿ ಧರ್ಮದವರು ಸಮಾನವಾಗಿ ಬಾಳುವ ಹಕ್ಕನ್ನು ಸಂವಿಧಾನ ನೀಡಿದೆ. ಅಂಬೇಡ್ಕರ್ ದೃಷ್ಠಿಕೋನದಲ್ಲಿ ನವಯಾನ ಬುದ್ದ ಧಮ್ಮವನ್ನು ಆಚರಿಸುವ ಮೂಲಕ ಸಮ ಸಮಾಜ ನಿರ್ಮಾಣ ಮಾಡಿ ವಿಚಾರ, ವಿಶಾಲತೆಗೆ ಒಳಗಾಗಿ ಸದೃಢತೆಯನ್ನು ಗಳಿಸಿಕೊಳ್ಳಬಹುದು ಎಂದು ತಿಳಿಸಿದರು.;
ಡಾ.ವಿ.ಬಸವರಾಜ್, ಡಿ.ದುರುಗೇಶಪ್ಪ, ಚಿಕ್ಕಣ್ಣ ವೇದಿಕೆಯಲ್ಲಿದ್ದರು.

ಕೆ.ಕುಮಾರ್, ರಾಮು ಗೋಸಾಯಿ, ಹನುಮಂತಪ್ಪ ದುರ್ಗ, ಬಿ.ರಾಜಣ್ಣ, ರಾಮು ಇನ್ನು ಅನೇಕ ದಲಿತ ಮುಖಂಡರುಗಳು ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!