ನಿಗದಿತ ಸಮಯಕ್ಕೆ ಬಾರದೆ, ಈ ರೀತಿ ಮಾತನಾಡಿದರೆ : ಅನಿತಾ ಕುಮಾರಸ್ವಾಮಿಗೆ ಪ್ರಶ್ನಿಸಿದ ಅಶ್ವತ್ಥ್ ನಾರಾಯಣ್..?

suddionenews
1 Min Read

 

 

ಬೆಂಗಳೂರು: ರಾಮನಗರದ ಹಾರೋಹಳ್ಳಿ ಕಾರ್ಯಕ್ರಮದಲ್ಲಿ ಅನಿತಾ ಕುಮಾರಸ್ವಾಮಿ ಬರುವುದಕ್ಕೂ ಮುನ್ನವೇ ಉದ್ಘಾಟನೆ ಮಾಡಲಾಗಿತ್ತು. ಈ ವಿಚಾರವಾಗಿ ಅನಿತಾ ಕುಮಾರಸ್ವಾಮಿ ವೇದಿಕೆ ಮೇಲೆಯೇ ಆಕ್ರೋಶ ಹೊರ ಹಾಕಿದ್ದರು. ಸಚಿವ ಅಶ್ವತ್ಥ್ ನಾರಾಯಣ್ ಅವರಿಗೆ ತಿರುಗೇಟು ನೀಡಿದ್ದರು. ಇದೀಗ ಅಶ್ವತ್ಥ್ ನಾರಾಯಣ್ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ.

 

“ಹಾರೋಹಳ್ಳಿ ನೂತನ ತಾಲೂಕು ಕಚೇರಿ ಉದ್ಘಾಟನೆ ವೇಳೆ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರಿಗೆ ಅಪಮಾನಿಸಲಾಗಿದೆ ಎಂಬರ್ಥದ ಮಾತನ್ನು ಕೇಳಿ ಆಶ್ಚರ್ಯವಾಯಿತು!. ಕಾರ್ಯಕ್ರಮ ಶಿಷ್ಟಾಚಾರದ ಪ್ರಕಾರವೇ ಜರುಗಿದರೂ ನಿಗದಿತ ಸಮಯಕ್ಕೆ ಹಾಜರಾಗದೇ, ಈ ರೀತಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ.

ನಮ್ಮ ರಾಮನಗರ ಜಿಲ್ಲೆಯ ಜನತೆಯ ಶ್ರೇಯವೇ ನನ್ನ ಆದ್ಯತೆ. ಕ್ಷುಲ್ಲಕ ರಾಜಕಾರಣ, ಕುಟುಂಬ ರಾಜಕಾರಣದ ಬಗ್ಗೆ ನನಗೆ ಆಸಕ್ತಿಯಿಲ್ಲ. ಬಿಜೆಪಿ ಸರ್ಕಾರ ಬರುವ ಮೊದಲು ಅಭಿವೃದ್ಧಿ ಹೇಗೆ ಕುಂಠಿತವಾಗಿತ್ತು, ನಮ್ಮ ಸರ್ಕಾರ ಬಂದಮೇಲೆ ಏನೆಲ್ಲಾ ಅಭಿವೃದ್ಧಿ ಕೆಲಸಗಳು ಆಗಿವೆ ಎನ್ನುವುದು ಜನರಿಗೂ ಗೊತ್ತಿದೆ, ದಾಖಲೆಗಳೂ ಹೇಳುತ್ತವೆ.

ಹಾರೋಹಳ್ಳಿ ಪ್ರತ್ಯೇಕ ತಾಲೂಕು ರಚನೆಯಲ್ಲಿ ಶ್ರೀ @hd_kumaraswamy ಅವರ ಕೊಡುಗೆಯ ಬಗ್ಗೆ ವೇದಿಕೆಯಲ್ಲಿ ಹೇಳಿದ್ದೇನೆ. ಇನ್ನೊಬ್ಬರ ಕೆಲಸಕ್ಕೆ ಕ್ರೆಡಿಟ್‌ ತೆಗೆದುಕೊಳ್ಳುವ ದುರ್ಬುದ್ಧಿಯಾಗಲಿ, ಕೆಲಸವನ್ನೇ ಮಾಡದೇ ನಾನೇ ಮಾಡಿದ್ದು ಎನ್ನುವ ಕುಬುದ್ಧಿಯಾಗಲಿ ನನ್ನಲ್ಲಿಲ್ಲ. ನೇರ ನುಡಿ, ಅಭಿವೃದ್ಧಿಪರ ರಾಜಕಾರಣ ನನ್ನದು” ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *