ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಅಕ್ಕಿಭಾಗ್ಯದ ವಿಚಾರವಾಗಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ಪ್ಲ್ಯಾನ್ ಮಾಡಿದ್ದಾರೆ. ಇದರ ಮಧ್ಯೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬೊಮ್ಮಾಯಿ ಅವರು, ಮುಂದಿನ ತಿಂಗಳಿನಿಂದ ಹತ್ತು ಕೆಜಿ ಅಕ್ಕಿ ನೀಡಬೇಕು. ಇಲ್ಲವಾದರೆ ಅವರವರ ಅಕೌಂಟ್ ಗೆ ಹಣ ಸಂದಾಯ ಮಾಡಿ. ಇಲ್ಲವಾದರೆ ನಾವೂ ಹೋರಾಟದ ಹಾದಿ ಹಿಡಿಯುತ್ತೇವೆ. ರಾಹ್ಯ ಸರ್ಕಾರ ರಾಜ್ಯದ ಬಡ ಜನರಿಗೆ ಹತ್ತು ಕೆಜಿ ಅಕ್ಕಿ ಕೊಡುತ್ತೀನಿ ಅಂತ ಹೇಳಿ ಮೋಸ ಮಾಡುತ್ತಿದೆ. ಇನ್ನೊಂದು ಕಡೆ ಮಾತು ತಪ್ಪಿ ದೋಖಾ ಮುಂದುವರೆಸಿದ್ದಾರೆ.
ಕೇಂದ್ರ ಸರ್ಕಾರ FSA ಪ್ರಕಾರ ಎಲ್ಲಾ ರಾಜ್ಯಗಳಿಗೂ ಬಿಪಿಎಲ್ ಕಾರ್ಡ್ ಇರುವವರಿಗೆ ತಲಾ 5 ಕೆಜಿ ಅಕ್ಕಿ ನೀಡುತ್ತಿದೆ. ನಾನು ಸಿಎಂ ಆಗಿದ್ದಾಗ 1 ರೂಪಾಯಿಗೆ 1 ಕೆಜಿ ಅಕ್ಕಿ ಖರೀದಿಸಿ ನೀಡಿದ್ದೇವೆ. FSA ಮೇಲೆ ಅವಲಂಬಿತವಾಗಬಾರದು ಎಂಬ ಕಾರಣಕ್ಕೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮೊದಲ ಕ್ಯಾಬಿನೆಟ್ ಸಭೆ ನಡೆದಿತ್ತು. ಅಲ್ಲಿ ಏನು ಮಾಡಿದ್ದಾರೋ ಗೊತ್ತಿಲ್ಲ. ನಿಮಗೆ ಹಣ ಹೊಂದಿಸಿ, ಅಕ್ಕಿ ಖರೀದಿಸಲು ಆಗಲಿಲ್ಲ ಅಂದರೆ ಏನು ಅರ್ಥ. ನಿಮ್ಮ ಅತ್ಯಂತ ಪ್ರಮುಖ ಯೋಜನೆ ಇದು. ನೀವೂ ಈ ಮೊದಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕಿತ್ತು. ನಿಮ್ಮ ಆಹಾರ ಸಚಿವರನ್ನು ಕಳುಹಿಸಬೇಕಿತ್ತು ಎಂದು ತಿರುಗೇಟು ನೀಡಿದ್ದಾರೆ.