Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಗುರವಾದ ಮಾತಾಡಿದರೆ ತಕ್ಕ ಉತ್ತರ ನೀಡಬೇಕಾಗುತ್ತದೆ : ಯತ್ನಾಳ್ ಗೆ ಎಚ್ಚರಿಕೆ ನೀಡಿದ ವಿಜಯೇಂದ್ರ

---Advertisement---

ಚಿತ್ರದುರ್ಗ: ಬಾಯಿಗೆ ಬಂದಂತೆ ಮಾತನಾಡಲು ಈಗಲಾದರೂ ಬಿಡಿ ಹೀಗೆ ಹಗುರವಾಗಿ ಮಾತನಾಡಿದರೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಯತ್ನಾಳ್ ಹೇಳಿಕೆಗೆ ವಿಜಯೇಂದ್ರ ಟಾಂಗ್ ನೀಡಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಪದೇಪದೇ ಟೀಕಾ ಪ್ರಹಾರ ನಡೆಸುತ್ತಿರುವ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಯತ್ನಾಳ್ ಏನ್ ಮಾತನಾಡುತ್ತಾರೆ ಆ ಭಗವಂತನಿಗೆ ಗೊತ್ತು. ಯಡಿಯೂರಪ್ಪ ವೇದಿಕೆ ಮೇಲೆ ಮೇಲೆ ಹತ್ತಬಾರದು ಎಂದು ಹೇಳಿದ್ದಾರೆ. ಯಡಿಯೂರಪ್ಪನವರು ಮೂರ್ನಾಲ್ಕು ದಶಕದಿಂದ ರಾಜ್ಯದಲ್ಲಿ ರೈತರ ಪರ ಧ್ವನಿ ಎತ್ತಿದ ನಾಯಕ ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಸೇರಿ ಹಲವಾರು ಜನ ಪಕ್ಷ ಕಟ್ಟಿದ್ದಾರೆ ಅವರು ಪಕ್ಷ ಕಟ್ಟದಿದ್ದರೆ, ಕೆಲವರು ವೇದಿಕೆ ಹತ್ತುವ ಯೋಗ್ಯತೆ ಇರುತ್ತಿರಲಿಲ್ಲ. ಯಡಿಯೂರಪ್ಪ ಅವರ ಕೊಡುಗೆ ಏನು ಅಂತ ಅರ್ಥ ಮಾಡ್ಕೋಬೇಕು, ಮನಬಂದಂತೆ ಮಾತನಾಡುವುದನ್ನು ಬಿಡಬೇಕು ಇಲ್ಲವಾದರೆ ತಕ್ಕ ಉತ್ತರ ನೀಡಲಾಗುತ್ತದೆ ಎಂದರು.

ಸಿದ್ದರಾಮಯ್ಯ ಸರ್ಕಾರ ಅಹಿಂದ ಹೆಸರಿನಲ್ಲಿ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ ಎಂದು ಆಡಳಿತ ಪಕ್ಷದ ಶಾಸಕರು ಛೀಮಾರಿ ಹಾಕಿದ್ದಾರೆ. ಕಳೆದ ಎರಡು ವರ್ಷದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರಕ್ಕೂ ಅನುದಾನ ನೀಡಿಲ್ಲ. ಭ್ರಷ್ಟಾಚಾರ ಕೂಡ ರಾಜ್ಯದಲ್ಲಿ ನಡೆಯುತ್ತಿದೆ. ಆಡಳಿತ ಸರ್ಕಾರ ಶಾಸಕರ ವಿಶ್ವಾಸ ಕೂಡ ಕಳೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment