Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾನೂನು ಬಾಹಿರವಾಗಿ ಅಂಗನವಾಡಿ ಕಾರ್ಯಕರ್ತೆ ನೇಮಕ : ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಸ್ಥಳೀಯರಲ್ಲದ ಆಶಾರಾಣಿ ಕೋಂ ಮಂಜುನಾಥ್ ಇವರನ್ನು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಿರುವ ಹೊಳಲ್ಕೆರೆ ತಹಶೀಲ್ದಾರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ ಹೋಬಳಿ ಶೃಂಗೇರಿ
ಹನುಮನಹಳ್ಳಿ ಗೊಲ್ಲರಹಟ್ಟಿಯ ದೀಪ ಕೋಂ ಶಿವರಾಜ್‍ರವರು ನ್ಯಾಯವಾದಿ ಸೌಮ್ಯ ಜೋಗಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಕುಟುಂಬದೊಂದಿಗೆ ಸೋಮವಾರ ಧರಣಿ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಿ ನರೇಂದ್ರಮೋದಿಗೆ ಮನವಿ ಸಲ್ಲಿಸಿದರು.

ಚಳ್ಳಕೆರೆ ತಾಲ್ಲೂಕು ತಳಕು ಹೋಬಳಿಯ ತಿಮ್ಮಪ್ಪನಹಳ್ಳಿ ಗೊಲ್ಲರಹಟ್ಟಿಯ ಆಶಾರಾಣಿ ದಿನಾಂಕ : 24-5-2021 ರಲ್ಲಿ ವಿವಾಹವಾಗಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಯನ್ನು ಗಿಟ್ಟಿಸಿಕೊಂಡಿರುವುದರಿಂದ ಸ್ಥಳೀಯಳಾಗಿರುವ ನನಗೆ ಅನ್ಯಾಯವಾಗಿದೆ. ಬಿ.ದುರ್ಗ ನಾಡ ಕಚೇರಿ ಸೆಕ್ರೆಟರಿ, ಹೊಳಲ್ಕೆರೆ ತಾಲ್ಲೂಕು ಶಿಶು ಅಭಿವೃದ್ದಿ ಅಧಿಕಾರಿ ಮತ್ತು ಉಪ ವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಗಮನಕ್ಕೂ ತಂದಿರುತ್ತೇನೆ. ಕಾನೂನುಬದ್ದವಾಗಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಹಳಾಗಿರುವ ನನಗೆ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಸಿಗಬೇಕು. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಆಶಾರಾಣಿ ಕೋಂ ಮಂಜುನಾಥ್ ಇವರ ಹೆಸರನ್ನು ತಡೆಹಿಡಿಯಲಾಗಿದೆ. ಆದರೆ ದಿನಾಂಕ : 20-3-2025 ರಂದು ಪ್ರಕಟಿಸಿರುವ ಆಯ್ಕೆ ಪಟ್ಟಿಯಲ್ಲಿ ಆಶಾರಾಣಿ ಕೋಂ ಮಂಜುನಾಥ್‍ರವರ ಹೆಸರಿರುವುದು ನನಗೆ ಅನ್ಯಾಯವಾಗಿದೆ. ಹಾಗಾಗಿ ಸ್ಥಳೀಯಳಲ್ಲದ ಆಶಾರಾಣಿಯ ಆಯ್ಕೆಯನ್ನು ರದ್ದುಪಡಿಸಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಯನ್ನು ನನಗೆ ನೀಡುವಂತೆ ದೀಪ ಆಗ್ರಹಿಸಿದರು.

ಮಹೇಶ್ವರಿ, ಗಂಗಮ್ಮ ಟಿ, ಜಯಮ್ಮ, ರಮೇಶ, ಲಕ್ಷ್ಮಿಕಾಂತ್, ಅಶೋಕ್ ಬೆಳಗಟ್ಟ ಇವರುಗಳು ಪ್ರತಿಭಟನೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment