Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ರಮ ಅನ್ನಭಾಗ್ಯ ಅಕ್ಕಿ, ಲಾರಿ ಮತ್ತು ಚಾಲಕ ವಶ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 21 : ಬಡವರಿಗೆ ಹಂಚಿಕೆ ಮಾಡಬೇಕಾದ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಐಮಂಗಲ ಪೊಲೀಸರು ಬಂಧಿಸಿದ್ದಾರೆ.

ಚಂದ್ರಶೇಖರ, ಗುರು, ವೀರೇಶ ಮತ್ತು
ಮುಜ್ಜು ಬಂಧಿತರು. ಅವರಿಂದ ಲಾರಿ ಮತ್ತು ಲಾರಿಯಲ್ಲಿದ್ದ ಸುಮಾರು 15 ಟನ್ ಪಡಿತರ ಅನ್ನ ಭಾಗ್ಯ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಐಮಂಗಲ ಠಾಣೆ ವ್ಯಾಪ್ತಿಯಲ್ಲಿ ಜನವರಿ 15 ರಂದು
ಅಕ್ರಮವಾಗಿ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಾಟ ಮಾಡುತ್ತಿರುತ್ತಾರೆ ಎಂಬ ಖಚಿತವಾಗಿ ಮಾಹಿತಿ ಮೇರೆಗೆ ಗುಯಿಲಾಳು ಟೋಲ್ ಪ್ಲಾಜಾದಲ್ಲಿ ಐಮಂಗಲ ವೃತ್ತ ನಿರೀಕ್ಷಕರಾದ ಎನ್ ಗುಡ್ಡಪ್ಪ ಮತ್ತು ಐಮಂಗಲ ಠಾಣೆಯ ಪಿಎಸ್‌ಐ ಶ್ರೀಮತಿ ಎಂ. ಟಿ. ದೀಪು ಹಾಗೂ ಸಿಬ್ಬಂಧಿಯವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಈ ವೇಳೆ ಸುಮಾರು 5 ಟನ್ ನಷ್ಟು ಅನ್ನಭಾಗ್ಯ ಅಕ್ಕಿ ಇರುವುದು ಕಂಡು ಬಂದಿರುತ್ತದೆ. ನಂತರ ಸ್ಥಳಕ್ಕೆ ಹಿರಿಯೂರು ಅಹಾರ ಶಿರಸ್ತೇದಾರ್ ಅದ ಎನ್ ಲಿಂಗರಾಜು ರವರು ಭೇಟಿ ನೀಡಿ ಪರಿಶೀಲಿಸಿದಾಗ ಸರ್ಕಾರದ ಅನ್ನ ಭಾಗ್ಯ ಯೋಜನೆಯ ಅಕ್ಕಿ ಇರುವುದು ತಿಳಿದು ಬಂದಿದೆ.
ಕೂಡಲೇ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ದಾಳಿ ಕೈಗೊಂಡು ಲಾರಿ ಮತ್ತು ಅನ್ನಭಾಗ್ಯ ಅಕ್ಕಿಯನ್ನು ಅಮಾನತು ಪಡಿಸಿಕೊಂಡ ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...