ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಹಿನ್ನಡೆಯಾಗಿದೆ.
87.44 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಗಳಿಕೆ ಸಂಬಂಧ ಲೋಕಾಯುಕ್ತ ಪೊಲೀಸರು ಜಮೀರ್ ವಿರುದ್ಧ ದೂರು ದಾಖಲಿದ್ದರು. ಈ ಪ್ರಕರಣ ರದ್ದು ಮಾಡುವಂತೆ, ಜಮೀರ್ ಅಹ್ಮದ್ ಖಾನ್ ಹೈಕೋರ್ಟ್ ಗೆ ಮನವಿ ಮಾಡಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿಯನ್ನು ರದ್ದುಗೊಳಿಸಿ, ಆದೇಶ ಹೊರಡಿಸಿದೆ.
30 ದಿನಗಳ ಕಾಲ ತನ್ನ ತೀರ್ಪನ್ನು ಅಮಾನತಿನಲ್ಲಿಟ್ಟಿದ್ದ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದೆ ಕೂಡ ಎಸಿಬಿ ತನಿಖೆಗೆ ತಡೆಯಾಜ್ಞೆ ನೀಡಲು ನಿರಾಕರಣೆ ಮಾಡಿತ್ತು. ಈ ಆದೇಶವನ್ನು ಜಮೀರ್ ಖಾನ್ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. 2019 ರ ಜೂನ್ನಲ್ಲಿ, ಜಮೀರ್ ಮತ್ತು ಐ-ಮಾನಿಟರಿ ಅಡ್ವೈಸರಿ ಪ್ರೈವೇಟ್ ಲಿಮಿಟೆಡ್‌ನ ಪ್ರವರ್ತಕ ಮೊಹಮ್ಮದ್ ಮನ್ಸೂರ್ ಖಾನ್ ನಡುವಿನ ಕೆಲವು ವಹಿವಾಟಿನ ಕುರಿತು ಜಾರಿ ನಿರ್ದೇಶನಾಲಯದಿಂದ ವರದಿಯನ್ನು ಪಡೆದ ನಂತರ ಎಸಿಬಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು.