Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿನಲ್ಲಿ ಅಕ್ರಮ ಪಡಿತರ ಸಾಗಾಟ :  ಅಕ್ಕಿ ಗೋಧಿ ವಶ, ಪ್ರಕರಣ ದಾಖಲು

---Advertisement---

 

ಸುದ್ದಿಒನ್, ಹಿರಿಯೂರು, ಡಿಸೆಂಬರ್.20 : ತಾಲ್ಲೂಕಿನ 103 ಗೇಟ್ ಬಳಿ ಈಚರ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಆಹಾರ ಸರಬರಾಜು ಶಿರಸ್ತೇದಾರ್ ಮತ್ತು ಇನ್ನಿತರ ಅಧಿಕಾರಿಗಳು ದಾಳಿ ನಡೆಸಿ, ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಕುಷ್ಟಗಿ ತಾಲೂಕಿನ ಎಂ. ಗೂಡದೂರು ಗ್ರಾಮದ 32 ವರ್ಷದ ಶಿವಪುತ್ರ ಎಂಬ ಲಾರಿ ಚಾಲಕ ತನ್ನ  ಈಚರ್ ಲಾರಿಯಲ್ಲಿ 30ರಿಂದ 40 ಚೀಲಗಳಲ್ಲಿ ಅಕ್ಕಿ ಮತ್ತು ಗೋಧಿ ತುಂಬಿಕೊಂಡು ಬೇರೆಡೆಗೆ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ ಅನ್ನಭಾಗ್ಯ ಯೋಜನೆಯ ಅಕ್ಕಿ ಹಾಗೂ ಗೋಧಿಯಂತೆ ಕಂಡು ಬಂದ ಹಿನ್ನೆಲೆಯಲ್ಲಿ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜೇಶ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಗೌಡ ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment