ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.10 : ರಾಷ್ಟ್ರ ಧ್ವಜ ರಾಷ್ಟ್ರದ ಗೌರವ ಮತ್ತು ಭಾರತೀಯರ ರಾಷ್ಟ್ರೀಯತೆಯನ್ನು ಬಿಂಬಿಸುವ ಲಾಂಛನವಾಗಿದೆ. ನಮ್ಮ ಸಂವಿಧಾನದಲ್ಲಿ ರಾಷ್ಟ್ರ ಧ್ವಜಕ್ಕೆ ತನ್ನದೇ ಆದ ಸ್ಥಾನಮಾನವನ್ನು ಕಲ್ಪಿಸಲಾಗಿದೆ. ಅಂತಹ ರಾಷ್ಟ್ರಧ್ವಜಕ್ಕೆ ಅವಮಾನವಾದರೆ ಭಾರತೀಯರಿಗೆ ಸಹಿಸಿಕೊಳ್ಳಲಾಗುವುದಿಲ್ಲ.
ಆದರೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಇಮಾಂಪುರ ಬಂಡೆಹಟ್ಟಿ ಗ್ರಾಮದ ಬಳಿ ತ್ರಿವರ್ಣ ಧ್ವಜವನ್ನು ವಿರೂಪಗೊಳಿಸಿ ಅವಮಾನ ಮಾಡಿರುವ ಘಟನೆ ನಡೆದಿದೆ. ಯಾರೋ ಕಿಡಿಗೇಡಿಗಳು ತ್ರಿವರ್ಣ ಧ್ವಜದಲ್ಲಿಯೇ ಮೆಕ್ಕಾ ಮತ್ತು ದರ್ಗಾ ಚಿತ್ರ ರೂಪಿಸಿ ವಿಕೃತಿ ಮೆರೆದಿದ್ದಾರೆ. ಆ ಬಾವುಟವನ್ನು ಊರಿನ ಹೆಸರನ್ನು ಸೂಚಿಸುವ ನಾಮಫಲಕದ ಕಂಬಕ್ಕೆ ಕಟ್ಟಿ ವಿವಾದವನ್ನುಂಟು ಮಾಡಿದ್ದಾರೆ.
ತ್ರಿವರ್ಣ ಧ್ವಜದಲ್ಲಿ ಮೆಕ್ಕಾ ಮತ್ತು ದರ್ಗಾ ಚಿತ್ರ : ಚಳ್ಳಕೆರೆಯಲ್ಲಿ ಕಿಡಿಗೇಡಿಗಳ ಕುಕೃತ್ಯ pic.twitter.com/FIgN9KcBVp
— suddione-kannada News (@suddione) October 10, 2023
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಶ್ವಹಿಂದೂ ಪರಿಷದ್, ಬಜರಂಗದಳ ಕಾರ್ಯಕರ್ತರು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು ಸೇರಿದಂತೆ ಪ್ರಗತಿಪರರು ಆಕ್ರೋಶ ವ್ಯಕ್ತಪಡಿಸಿ ತೀವ್ರವಾಗಿ ಖಂಡಿಸಿದ್ದಾರೆ. ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಕದಡುವಂತ ಮತ್ತು ಈ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರ ವಿರುದ್ದ ಕಠಿಣ ಕಾನೂನಿನ ಕ್ರಮವನ್ನು ಕೈಗೊಳ್ಳಬೇಕೆಂದು ಚಳ್ಳಕೆರೆ ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.
ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಳ್ಳಕೆರೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.