ಚಿತ್ರದುರ್ಗ, ಏ.30: ಗ್ರಾಮೀಣ ಮಟ್ಟದ ಅಹವಾಲುಗಳನ್ನು ಆಲಿಸಲು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಆರಂಭಿಸಿರುವ ‘ಗ್ರಾಮ-ಫೋನ್’ ಉಚಿತ ಸಹಾಯವಾಣಿಯು ಸಾರ್ವಜನಿಕರಲ್ಲಿ ಭರವಸೆ ಮೂಡಿಸಿದೆ. 20 ನವೆಂಬರ್ 2025 ರಂದು ಪ್ರಾರಂಭವಾದ ಈ ಸೇವೆಯು ಇದುವರೆಗೂ ಜಿಲ್ಲೆಯ ಗ್ರಾಮೀಣ ಭಾಗದ ಸುಮಾರು 300 ದೂರುಗಳನ್ನು ಸ್ವೀಕರಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದೆ ಎಂದು ಜಿ.ಪಂ.ಸಿಇಓ ಡಾ.ಆಕಾಶ್ ತಿಳಿಸಿದ್ದಾರೆ.
ಸಹಾಯವಾಣಿಯ ಕಾರ್ಯವೈಖರಿ:
ಜಿಲ್ಲಾ ಪಂಚಾಯತ್ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಈ ಸಹಾಯವಾಣಿ 1800-425-1978ಕ್ಕೆ ಸಾರ್ವಜನಿಕರು ಕರೆ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಸ್ವೀಕೃತವಾದ ಪ್ರತಿಯೊಂದು ದೂರಿಗೂ ಸಂಬAಧಿಸಿದAತೆ ದೂರುದಾರರ ಮೊಬೈಲ್ ಸಂಖ್ಯೆಗೆ ಸಂದೇಶ ರವಾನಿಸಲಾಗುತ್ತದೆ. ನಂತರ ಆಯಾ ಇಲಾಖೆಯ ಅಧಿಕಾರಿಗಳಿಗೆ ದೂರುಗಳನ್ನು ವರ್ಗಾಯಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.
ಸಹಾಯವಾಣಿ ಪ್ರಾರಂಭವಾದಾಗಿನಿAದ ಮನರೇಗಾ 42, ಗ್ರಾಮೀಣ ಕುಡಿಯುವ ನೀರಿಗೆ 84, ನೈರ್ಮಲ್ಯ 39, ವಸತಿ 14, ಗ್ರಾಮ ಪಂಚಾಯಿತಿ ಆಡಳಿತ ಮತ್ತು ಸಿಬ್ಬಂದಿ ಕುರಿತು 36, ಇ-ಸ್ವತ್ತಿಗೆ 85 ಸೇರಿ ಒಟ್ಟು 300 ಕರೆಗಳು ಬಂದಿವೆ. ಇವುಗಳಿಗೆ ಸ್ಪಂದಿಸಿ ಕೂಡಲೆ ಪರಿಹಾರ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ವಿಶೇಷವಾಗಿ ‘ಕುಡಿಯುವ ನೀರಿನ’ ಪೂರೈಕೆಗೆ ಸಂಬAಧಿಸಿದAತೆ ಉದ್ಭವಿಸಬಹುದಾದ ಸಮಸ್ಯೆಗಳನ್ನು ಪರಿಹರಿಸಲು ಈ ಸಹಾಯವಾಣಿ ಹೆಚ್ಚಿನ ಒತ್ತು ನೀಡಲಿದೆ. ಗ್ರಾಮೀಣ ಭಾಗದ ಜನರು ಯಾವುದೇ ಕುಂದುಕೊರತೆಗಳಿದ್ದಲ್ಲಿ ಈ ಉಚಿತ ಸಹಾಯವಾಣಿಯ ಸದುಪಯೋಗ ಪಡಿಸಿಕೊಳ್ಳುವಂತೆ ಜಿ.ಪಂ.ಸಿಇಓ ಡಾ.ಆಕಾಶ್ ಕೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












