Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜಾತಿಗಣತಿ ವರದಿ ಜಾರಿಗೊಳಿಸಿ : ಯೋಗೀಶ್ ಸಹ್ಯಾದ್ರಿ ಒತ್ತಾಯ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 17  : ಸಮಾನತೆ ಮತ್ತು ಭ್ರಾತೃತ್ವ ಪ್ರಜಾಪ್ರಭುತ್ವದ ಕಣ್ಣುಗಳು. ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿಗೊಳಿಸುವುದು ಪ್ರಸ್ತುತ ಹಾಗು ಸಮಾಜದ ಸರ್ವ ಜಾತಿಗಳ ಅಭ್ಯುದಯಕ್ಕೆ ಪೂರಕವಾಗಲಿದೆ. ಈ ವರದಿ ಜಾರಿಯಿಂದ ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳಿಗೆ ಹಾಗು ಮಹಿಳೆಯರಿಗೆ ವರವಾಗಲಿದೆ ಎಂದು ಲೇಖಕ ಹಾಗೂ ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದೆಲ್ಲೆಡೆ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಯೋಗೀಶ್ ಸಹ್ಯಾದ್ರಿ ಅವರು, ಕಾಂತರಾಜ್ ಆಯೋಗವು 2015 ರಿಂದ ಸಮೀಕ್ಷೆ ನಡೆಸಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯು ಮೇಲ್ನೋಟಕ್ಕೆ ಅತ್ಯಂತ ಸ್ಪಷ್ಟ ಹಾಗು ವೈಜ್ಞಾನಿಕವಾದುದಾಗಿದ್ದು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಹಿಂದುಳಿದ ಹಲವಾರು ಜಾತಿ-ವರ್ಗಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಸುಮಾರು 170 ಕೋಟಿಗಳಷ್ಟು ಖರ್ಚು ಮಾಡಿ ವೈಜ್ಞಾನಿಕ ದತ್ತಾಂಶಗಳೊಂದಿಗೆ ಸಿದ್ಧಪಡಿಸಿರುವ ವರದಿಯಿಂದ ಹಿಂದುಳಿದ ವರ್ಗಗಳ ಮತ್ತು ಶೋಷಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದಲ್ಲಿ ಪಿ.ಹೆಚ್.ಡಿ ಪದವಿ, ಮೆಡಿಕಲ್, ಇಂಜಿನಿಯರಿಂಗ್, ಸಿಇಟಿ, ಎನ್ಇಟಿ ಹಾಗು ಅನೇಕ ತರಹದ ಉದ್ಯೋಗವಕಾಶಗಳಲ್ಲಿ ಅತ್ಯಂತ ಪ್ರಯೋಜನಕಾರಿಯಾಗಲಿದೆ. ಆದ್ದರಿಂದ, ಹಿಂದುಳಿದ ವರ್ಗಗಳ ಅಹಿಂದ ನಾಯಕರೆಂದೇ ಗುರುತಿಸಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಎಲ್ಲ ಜಾತಿಗಳ ಜನರ ಹಿತದೃಷ್ಠಿಯಿಂದ ಈಗಾಗಲೇ ಸ್ವೀಕರಿಸಿರುವ ಕಾಂತರಾಜ್ ಆಯೋಗದ ವರದಿ ಹಾಗೂ ನ್ಯಾಯಮೂರ್ತಿ ಸದಾಶಿವ ಆಯೋಗದ ಒಳಮೀಸಲಾತಿ ವರದಿಯನ್ನು ಈ ವರ್ಷದಿಂದಲೇ ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ನೆಲೆಸಿರುವ ಎಲ್ಲ ಜಾತಿಗಳ ಜನರು ಕನ್ನಡಿಗರೇ ಆಗಿದ್ದು ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಹಾಗು ಇನ್ನಿತರ ಶೋಷಿತ ಸಮುದಾಯಗಳ ಅಭಿವೃದ್ಧಿ ಯಾವುದೇ ಸರ್ಕಾರಗಳ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. 1921 ರಲ್ಲಿ ಮಿಲ್ಲರ್ ಆಯೋಗದ ವರದಿಯಿಂದ ಅನೇಕ ಜಾತಿಗಳ ಆರ್ಥಿಕ, ಸಾಮಾಜಿಕ ಅಭಿವೃದ್ಧಿಯನ್ನು ಗಮನಿಸಬಹುದು. ಆದ್ದರಿಂದ ಆಗಸ್ಟ್ 01, 2024 ರಂದು ಸುಪ್ರೀಂಕೋರ್ಟ್ ಪೂರ್ಣಪೀಠ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಸದಾಶಿವ ಆಯೋಗದ ಒಳಮೀಸಲಾತಿ ಜಾರಿ ಹಾಗು 2018 ರಲ್ಲಿ ಪೂರ್ಣಗೊಂಡಿರುವ ಕಾಂತರಾಜ್ ಆಯೋಗದ ವರದಿಯನ್ನು ಸರ್ಕಾರ ಅಕ್ಟೋಬರ್ 25 ರಿಂದ ಜರುಗುವ ಸದನದಲ್ಲಿ ಚರ್ಚಿಸಿ ಶೀಘ್ರವಾಗಿ ಅನುಷ್ಠಾನಗೊಳಿಸುವುದು ಸೂಕ್ತವಾದುದು. ಇಂಥಹ ವಿಷಯಗಳಲ್ಲಿ ಸಾಹಿತಿಗಳು, ಬುದ್ಧಿಜೀವಿಗಳು, ವಿದ್ಯಾವಂತರು ಸರ್ಕಾರಕ್ಕೆ ಸಲಹೆ ನೀಡದೆ ಹೋದರೆ ರಾಜ್ಯದ ಬೆಳವಣಿಗೆಗೆ ಮಾರಕವಾಗಬಹುದು ಎಂದು ತಮ್ಮ ಪತ್ರಿಕಾ ಹೇಳಿಕೆಯ ಮೂಲಕ ಆಗ್ರಹಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment